Breaking | ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ತಳವಾರ್ ಚಮಕಾಯಿಸಿದ ದುಷ್ಕರ್ಮಿ ವಶ !
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಅಡ್ಡಗಟ್ಟಿ ತಲವಾರು ಚಮಕಾಯಿಸಿದ ಘಟನೆ ಸಂಬಂಧ ಈಗ ಆರೋಪಿಯ ಬಂಧನ ಆಗಿದೆ. ನಿನ್ನೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಈ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ಮಂಗಳೂರು ಸಮೀಪದ ಫರು ನಿವಾಸಿ ಅಬ್ದುಲ್ ಖಾದರ್ ರವರ ಪುತ್ರ 38 ವರ್ಷದ ರಿಯಾಜ್ ಎಂಬಾತ ಬಂಧಿತ ಆರೋಪಿ.
ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಭಗವಾನ್ ಸೋನವಾಣೆ ಶುಕ್ರವಾರ ತಿಳಿಸಿದ್ದಾರೆ.
ಆರೋಪಿಯ ವಿರುದ್ಧ ಈ ಹಿಂದೆ ಯಾವುದೇ ಕ್ರಿಮಿನಲ್ ಪ್ರಕರಣಗಳು ದಾಖಲಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಮತ್ತು ವಶಕ್ಕೆ ಪಡೆದಾಗ ಆತನ ಬಳಿ ಯಾವುದೇ ಆಯುಧ ಪತ್ತೆಯಾಗಿಲ್ಲ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಭಗವಾನ್ ಸೋನವಾಣೆ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಯಾರೋ ಕಿಡಿಗೇಡಿಗಳು ಅಡ್ಡಗಟ್ಟಿ ತಲವಾರು ಝಳಪಿಸಿದ ಘಟನೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ಹರೀಶ್ ಪೂಂಜಾ ನಿನ್ನೆ ರಾತ್ರಿ ವೇಳೆಗೆ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ್ದರು. ಅವರು ಅಲ್ಲಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಸಂದರ್ಭ ಶಾಸಕ ಹರೀಶ್ ಪೂಂಜಾ ಅವರು ತನ್ನ ಕಾರು ಬಿಟ್ಟು ಸಂಬಂಧಿಯೋರ್ವರ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅವರನ್ನು ಪಡೀಲ್ ನಿಂದ ಫರಂಗಿಪೇಟೆಯವರೆಗೆ ಯಾರೋ ಬೆನ್ನಟ್ಟಿದ್ದರು. ಅಲ್ಲಿ ಫರಂಗಿಪೇಟೆ ಯಲ್ಲಿ ಅವರ ಕಾರಿಗೆ ಇನ್ನೊಂದು ಕಾರನ್ನು ಅಡ್ಡ ನಿಲ್ಲಿಸಲಾಯಿತು. ಆಗ ಕಾರಲ್ಲಿದ್ದ ಆಗಂತುಕ ಅವರಿಗೆ ಅವಾಚ್ಯ ಶಬ್ದದಿಂದ ಬೈದು ತಲವಾರು ಝಳಪಿಸಿ ಪರಾರಿಯಾಗಿದ್ದ ಎಂಬ ದೂರು ನೀಡಲಾಗಿತ್ತು.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಗೆ ಶಾಸಕ ಪೂಂಜಾ ಕಾರು ಚಾಲಕ ನವೀನ್ ದೂರು ನೀಡಿದ್ದು, ನಂತರ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ದೂರುದಾರರು ಆರೋಪಿ ಮತ್ತು ವಾಹನವನ್ನು ಗುರುತಿಸಿದ್ದು, ಈ ಹಿನ್ನೆಲೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆಯುವುದು ಸುಲಭ ಆಗಿತ್ತು.
ಪ್ರಾಥಮಿಕ ತನಿಖೆಯ ವೇಳೆ ಓವರ್ ಟೇಕ್ ವಿಷಯದಲ್ಲಿ ಘಟನೆ ನಡೆದಿದೆ ಎಂದು ತನಿಖೆ ವೇಳೆ ತಿಳಿದು ಬಂದಿದ್ದು, ಆರೋಪಿಯ ಸ್ಕಾರ್ಪಿಯೋ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ಈ ಆರೋಪಿಯ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳು ಈ ಹಿಂದೆ ದಾಖಲಾಗಿಲ್ಲ ಮತ್ತು ಆತನಲ್ಲಿ ಯಾವುದೇ ಆಯುಧ ಪತ್ತೆಯಾಗಿಲ್ಲ ಎಂದು ಮಾಹಿತಿ ತಿಳಿದು ಬಂದಿದ್ದು, ಇದೀಗ ಹೆಚ್ಚಿನ ತನಿಖೆ ನಡೆಯುತ್ತಿದೆ. ಶಾಸಕ ಪೂಂಜಾ ಅವರಿಗೆ ಗನ್ ಮ್ಯಾನ್ ಪ್ರೊಟೆಕ್ಷನ್ ನೀಡಿ ಭದ್ರತೆ ಹೆಚ್ಚಿಸಲಾಗಿದೆ.