KPSC SDA Selection List : 1323 SDA ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಈ ದಿನಾಂಕದಂದು ಬಿಡುಗಡೆ !!!

2020 ನೇ ಸಾಲಿನಲ್ಲಿ ಕರ್ನಾಟಕ ಪಬ್ಲಿಕ್ ಸರ್ವೀಸ್‌ ಕಮಿಷನ್  ಅಧಿಸೂಚಿಸಿದ್ದ 1323 SDA ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಹಾಗೂ ಇತರೆ ಹುದ್ದೆಗಳ ಅರ್ಹತಾ ಪಟ್ಟಿಗಳ ಸಂಭಾವ್ಯ ವೇಳಾಪಟ್ಟಿ ಪ್ರಕಟಿಸಿದೆ.

 

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 13-10-2022 ಕ್ಕೆ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗಳು ಯಾವ ಹಂತದಲ್ಲಿದೆ ಎಂದು ಪ್ರಕಟಣೆ ಬಿಡುಗಡೆ ಮಾಡಿದೆ. ಇದರ ಪ್ರಕಾರ ಆಯೋಗವು 2019-20ನೇ ಸಾಲಿನ ರಾಜ್ಯದ ವಿವಿಧ ಇಲಾಖೆಗಳಲ್ಲಿನ 1323 ಉಳಿಕೆ ಮೂಲ ವೃಂದದ / ಹೈದರಾಬಾದ್ ವೃಂದದ ಕಿರಿಯ ಸಹಾಯಕ / ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಯಾವಾಗ ಎಂದು ತಿಳಿಸಿದೆ.

ಆಯೋಗ ನೀಡಿರುವ ಮಾಹಿತಿ ಪ್ರಕಾರ ದಿನಾಂಕ 17-11-2022 ರಂದು ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದೆ.  2017ನೇ ಸಾಲಿನಲ್ಲಿ ಅಧಿಸೂಚಿಸಿದ್ದ ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಆರ್ಟ್‌ ಅಂಡ್ ಕ್ರಾಫ್ಟ್‌ ಶಿಕ್ಷಕರು ಹುದ್ದೆಗಳಿಗೆ ಅಕ್ಟೋಬರ್ 25, 2022 ರಂದು ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಕೆಪಿಎಸ್‌ಸಿ ವೇಳಾಪಟ್ಟಿಯಲ್ಲಿ ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave A Reply

Your email address will not be published.