ಮಸೀದಿಯಲ್ಲಿ ಪ್ರಾರ್ಥನೆ ಮಾಡುವ ಸಂದರ್ಭ 200 ಜನರ ಗುಂಪು ದಾಳಿ | ನಮಾಜ್ ಮಾಡುತ್ತಿದ್ದವರ ಮೇಲೆ ಹಲ್ಲೆ ಬೆದರಿಕೆ

ಮಸೀದಿಯಲ್ಲಿ ಪ್ರಾರ್ಥನೆ ಮಾಡುತ್ತಿರುವ ಸಂದರ್ಭದಲ್ಲಿ ಜನರ ಗುಂಪೊಂದು ಅಲ್ಲಿದ್ದ ಜನರಿಗೆ ಏಕಾಏಕಿ ದಾಳಿ ಮಾಡಿ, ಮಸೀದಿಯನ್ನು ಧ್ವಂಸ ಮಾಡಿದ ಘಟನೆಯೊಂದು ನಡೆದಿದೆ.

200 ಕ್ಕೂ ಹೆಚ್ಚು ಜನರ ಗುಂಪು ಗುರುಗ್ರಾಮ್‌ನ ಹಳ್ಳಿಯೊಂದರಲ್ಲಿದ್ದ ಮಸೀದಿಯನ್ನು ಧ್ವಂಸ ಮಾಡಿದ್ದು, ಒಳಗೆ ಪ್ರಾರ್ಥನೆ ಮಾಡುತ್ತಿದ್ದ ಜನರ ಮೇಲೆ ಹಲ್ಲೆ ಮಾಡಿದೆ. ಅಷ್ಟೇ ಅಲ್ಲದೇ, ಅಲ್ಲಿನ ಮಂದಿಯನ್ನು ಗ್ರಾಮದಿಂದ ಹೊರಹಾಕುವುದಾಗಿ ಬೆದರಿಕೆ ಹಾಕಿರುವ ಘಟನೆ ಕೂಡಾ ನಡೆದಿದೆ.

ಬುಧವಾರ ರಾತ್ರಿ ಗುರುಗ್ರಾಮ್ ಮ ಭೋರಾ ಕಲನ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಈ ಸಂಬಂಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಆದರೆ ಇಲ್ಲಿಯವರೆಗೂ ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ.

ಭೋರ ಕಾಳನ್ ಗ್ರಾಮದಲ್ಲಿ ಕೇವಲ ನಾಲ್ಕು ಮುಸ್ಲಿಂ ಕುಟುಂಬಗಳಿವೆ. ರಾಜೇಶ್ ಚೌಹಾಣ್ ಅಲಿಯಾಸ್ ಬಾಬು, ಅನಿಲ್ ಭಡೋರಿಯಾ ಮತ್ತು ಸಂಜಯ್ ವ್ಯಾಸ್ ನೇತೃತ್ವದ ಸುಮಾರು 200 ಜನರನ್ನು ಒಳಗೊಂಡ ಗುಂಪು ಬುಧವಾರ ಬೆಳಗ್ಗೆ ಮಸೀದಿಯನ್ನು ಸುತ್ತುವರೆದು ಪ್ರಾರ್ಥನಾ ಮಂದಿರಕ್ಕೆ ಪ್ರವೇಶಿಸಿ ಗದ್ದಲ ಸೃಷ್ಟಿಸಿದರು. ಅವರು ನಮಾಜಿಗಳನ್ನು ಗ್ರಾಮದಿಂದ ಹೊರಹಾಕುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸುಬೇದಾರ್ ನಜರ್ ಮೊಹಮ್ಮದ್ ಎಂಬುವರು ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ರಾತ್ರಿ ಮತ್ತೆ ಮಸೀದಿಯ ಪ್ರಾರ್ಥನಾ ಮಂದಿರದ ಒಳಗೆ ಪ್ರಾರ್ಥನೆ ಮಾಡುತ್ತಿರುವ ಸಂದರ್ಭದಲ್ಲಿ ಗುಂಪೊಂದು ಬಂದು, ನಮಾಜಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಹಾಗೂ ಪ್ರಾರ್ಥನಾ ಮಂದಿರಕ್ಕೆ ಬೀಗ ಹಾಕಿ, ನಮ್ಮನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ’ ಎಂದು ಸುಬೇದಾರ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ದೂರಿನ ಅನ್ವಯ ಎಫ್‌ಐಆರ್‌ ದಾಖಲಾಗಿದ್ದು, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತನಿಖಾಧಿಕಾರಿ ಹಿರಿಯ ಪೊಲೀಸ್‌ ಅಧಿಕಾರಿ ಗಜೇಂದರ್‌ ಸಿಂಗ್‌ ತಿಳಿಸಿದ್ದಾರೆ.‌

Leave A Reply

Your email address will not be published.