ಹಿಂದೂ ದ್ವೇಶಿ ಪತ್ರಕರ್ತೆ ರಾಣಾ ಅಯ್ಯೂಬ್ ಬಣ್ಣ ಬಯಲು | ಕೋವಿಡ್ ಹೆಸರಲ್ಲಿ 2.69 ಕೋಟಿ ಸಂಗ್ರಹ, ಕೇವಲ 29 ಲಕ್ಷ ಸದ್ಬಳಕೆ, ಉಳಿದದ್ದು ಸ್ವಂತ FD ಯಲ್ಲಿ– ಇಡಿ ಚಾರ್ಜ್ ಶೀಟ್ !
ಕೋವಿಡ್(Covid) ಪರಿಹಾರಕ್ಕ ಅಂತ ಒಟ್ಟು ಮೂರು ಅಭಿಯಾನಗಳಿಂದ 2.69 ಕೋಟಿ ರೂ. ಹಣವನ್ನು ಸಂಗ್ರಹಿಸಿ ಅದನ್ನು ವೈಯಕ್ತಿಕ ಖಾತೆಗೆ ವರ್ಗಾವಣೆ ಮಾಡಿ ಸಾರ್ವಜನಿಕರ ಹಣವನ್ನು ದುರುಪಯೋಗ ಮಾಡಿದ್ದಾಳೆ ಈ ಒನ್ ಸೈಡೆಡ್ ಪತ್ರಕರ್ತೆ. ಹಾಗೆಂದು ಜಾರಿ ನಿರ್ದೇಶನಾಲಯ ಪತ್ರಕರ್ತೆ ರಾಣಾ ಅಯ್ಯೂಬ್(Rana Ayyub) ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದೆ.
ಸದಾ ಬಿಜೆಪಿ ಮತ್ತು ಮೋದಿಯ ವಿರುದ್ಧ ಬರೆಯುತ್ತಿದ್ದ ಆಕೆಯ ನಿಜ ಬಣ್ಣ ಬಯಲಾಗಿದೆ. ಹಾಗಿದ್ದರೂ, ” ನನ್ನ ಪೆನ್ನನ್ನು ಸುಮ್ಮನಿರಿಸಲು ಆಗಲ್ಲ “ಎಂದಿದ್ದಾಳೆ ಅಯ್ಯೂಬ್. ಆದರೆ ಅಷ್ಟು ದೊಡ್ಡ ಮೊತ್ತದ ಹಣದ ಬಗ್ಗೆ ಮೌನ ವಹಿಸಿದ್ದಾರೆ.
ಕೋವಿಡ್ ನೆಪದಲ್ಲಿ ಆಕೆ ಬರೋಬ್ಬರಿ 2,69,44,680 ರೂ. ಹಣವನ್ನು ಸಂಗ್ರಹಿಸಿದ್ದಾಳೆ. ಅದರಲ್ಲಿ ಕೇವಲ 29 ಲಕ್ಷ ರೂ. ಮಾತ್ರ ಪರಿಹಾರ ನಿಧಿಗೆ ಬಳಕೆಯಾಗಿದ್ದು ಉಳಿದ ಹಣ ಸ್ವಾಹಾ ಆಗಿದೆ ಎಂದು ಉಲ್ಲೇಖಿಸಿದೆ.
ಭಾರತೀಯ ದಂಡ ಸಂಹಿತೆ, ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಕಪ್ಪುಹಣ ಕಾಯ್ದೆಯ ವಿವಿಧ ಸೆಕ್ಷನ್ ಅಡಿ ಕೇಸ್ ದಾಖಲಿಸಿ ತನಿಖೆ ನಡೆಸಿದ ಇಡಿ ಇಂದು ಉತ್ತರಪ್ರದೇಶದ ಗಾಜೀಯಾಬಾದ್‌ನಲ್ಲಿರುವ ಪಿಎಂಎಲ್‌ಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದೆ.
ಅಲ್ಲಿ ಸಂಗ್ರಹವಾದ ಹಣವನ್ನು ತಂದೆ ಮತ್ತು ಸಹೋದರಿಯ ಖಾತೆಗೆ ಆಕೆ ವರ್ಗಾವಣೆ ಮಾಡಿದ್ದು, ಈ ಪೈಕಿ 50 ಲಕ್ಷ ರೂ. ಹಣವನ್ನು ಎಫ್‌ಡಿ ಇಟ್ಟರೆ, 50 ಲಕ್ಷ ರೂ. ಹಣವನ್ನು ಹೊಸದಾಗಿ ತೆರೆದ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗಿದೆ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.
ವೃತ್ತಿಯಲ್ಲಿ ಪತ್ರಕರ್ತರಾಗಿರುವ ಅಯ್ಯೂಬ್ ಅವರು ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆಯ(FCRA) ಅಡಿಯಲ್ಲಿ ನೋಂದಣಿ ಮಾಡದೇ ವಿದೇಶದಿಂದ ದೇಣಿಗೆ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.