ನಟಿ ದಿವ್ಯಾ ಶ್ರೀಧರ್ ಪತಿ ಅಮ್ಜಾದ್ ಖಾನ್ ಅರೆಸ್ಟ್ !!!

ಆಕಾಶದೀಪ ಧಾರವಾಹಿ ನಟಿ ದಿವ್ಯಾ ಶ್ರೀಧರ್ ಅವರು ಇತ್ತೀಚೆಗಷ್ಟೇ ತನ್ನ ಪತಿ ಹಲ್ಲೆ ಮಾಡಿದ್ದಾಗಿ ಹಾಗೂ ನನ್ನನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿಸಿ ಮದುವೆ ಆಗಿದ್ದು, ನಾನು ಗರ್ಭಿಣಿಯಾಗಿದ್ದು ನನ್ನ ಮೇಲೆ ಹಲ್ಲೆ ಮಾಡಿದ್ದಾನೆಂದು ಹೇಳಿದ್ದು, ಇದನ್ನು ಅವರು ಆಸ್ಪತ್ರೆಗೆ ದಾಖಲಾಗಿ ವೀಡಿಯೋ ಮೂಲಕ ಆರೋಪ ಮಾಡಿದ್ದು, ಇವತ್ತು ಅವರ ಪತಿ ಅಮ್ಹಾದ್ ಖಾನ್ ಅವರನ್ನು ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ.

 

ತನಗೆ ಸುಳ್ಳು ಹೇಳಿ ಮದುವೆ ಆಗಿದ್ದಾನೆ, ತನ್ನ ಮೇಲೆ ಹಲ್ಲೆ ಮಾಡಿದ್ದಾನೆ ಹಾಗೂ ಲವ್‌ ಜಿಹಾದ್‌ ಆರೋಪವನ್ನೂ ಪತಿಯ ಮೇಲೆ ಹೊರೆಸಿ ದಿವ್ಯಾ ದೂರು ನೀಡಿದ್ದರು. ಈ ದೂರಿನಲ್ಲಿ ಪತಿಯು ತಮ್ಮ ಮೇಲೆ ಮಾಡಿದ ಹಲ್ಲೆಯಿಂದಾಗಿ ಗರ್ಭಪಾತದ ಭಯವೂ ಕಾಡುತ್ತಿದೆ ಎಂದು ಉಲ್ಲೇಖಿಸಿದ್ದರು. ಈ ದೂರಿನ ಅನ್ವಯ ಅಮ್ಜಾದ್ ಖಾನ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಆಸ್ಪತ್ರೆಯಿಂದ ಪತಿ ಅಮ್ಜಾದ್ ಖಾನ್ ಮನೆಗೆ ಹೋಗಿರುವ ದಿವ್ಯಾ ಶ್ರೀಧರ್, ಅಲ್ಲಿ ಮತ್ತೆ ತನಗಾದ ಅನ್ಯಾಯದ ಬಗ್ಗೆ ಮಾತನಾಡಿದ್ದಾರೆ. ಅನಂತರ ಇಬ್ಬರ ಮಧ್ಯೆ ಜಗಳ ವಾಗಿದೆ. ದಿವ್ಯಾ ಶ್ರೀಧರ್ ಕೂಗಾಡುತ್ತಿರುವ ವಿಡಿಯೋವನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿರುವ ಅಮ್ಜಾದ್ ಖಾನ್ ಅದನ್ನು ಮಾಧ್ಯಮಗಳಿಗೆ ನೀಡಿದ್ದರು

Leave A Reply

Your email address will not be published.