KPSC Group C Recruitment 2022 : KPSC ಇಂದ ಗ್ರೂಪ್‌ ಸಿ ಹುದ್ದೆಗೆ ಅಧಿಸೂಚನೆ ಪ್ರಕಟ!!!

ಕರ್ನಾಟಕ ಲೋಕಸೇವಾ ಆಯೋಗವು (KPSC) ಇದೀಗ ಗ್ರೂಪ್‌ ಸಿ ಹುದ್ದೆಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ 55+3 ಬ್ಯಾಕ್‌ಲಾಗ್, 17HK ಸಹಾಯಕ ಸಾಂಖ್ಯಿಕ ಅಧಿಕಾರಿ ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನಿಸಿದೆ.

ಅಪ್ಲಿಕೇಶನ್ ಸಲ್ಲಿಸಲು ಪ್ರಾರಂಭಿಕ ದಿನಾಂಕ: 20-10-2022
ಅಪ್ಲಿಕೇಶನ್ ಸಲ್ಲಿಸಲು ಕೊನೆ ದಿನಾಂಕ: 18-11-2022
ಅಪ್ಲಿಕೇಶನ್ ಶುಲ್ಕವನ್ನು ಪಾವತಿಸಲು ಅಂತಿಮ ದಿನಾಂಕ: 19-11-2022

ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ 55+3 ಬ್ಯಾಕ್‌ಲಾಗ್, 17HK ಸಹಾಯಕ ಸಾಂಖ್ಯಿಕ ಅಧಿಕಾರಿ ಹುದ್ದೆಗಳಿಗೆ ಇದೀಗ ಕೆಪಿಎಸ್‌ಸಿ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 20 ರಂದು ಲಿಂಕ್‌ ಬಿಡುಗಡೆ ಮಾಡಲಿದ್ದು, ನವೆಂಬರ್ 18 ರವರೆಗೆ ಅರ್ಜಿಗೆ ಅವಕಾಶ ನೀಡಲಾಗಿದೆ.

ನೇಮಕಾತಿ ಪ್ರಾಧಿಕಾರ : ಕರ್ನಾಟಕ ಲೋಕಸೇವಾ ಆಯೋಗ
ಉದ್ಯೋಗ ಇಲಾಖೆ : ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ
ಹುದ್ದೆ ಹೆಸರು : ಸಹಾಯಕ ಸಾಂಖ್ಯಿಕ ಅಧಿಕಾರಿ (ಗ್ರೂಪ್‌ ಸಿ)
ಹುದ್ದೆಗಳ ಸಂಖ್ಯೆ : 55+3 ಬ್ಯಾಕ್‌ಲಾಗ್, 17HK
ವೇತನ ಶ್ರೇಣಿ : Rs.37,900 -Rs. 70,850

ವಿದ್ಯಾರ್ಹತೆ : ಗಣಿತ/ ಪ್ಯೂರ್ ಮ್ಯಾಥೆಮೆಟಿಕ್ಸ್‌ / ಸ್ಟ್ಯಾಟಿಸ್ಟಿಕ್ಸ್‌ / ಅಪ್ಲೈಡ್ ಸ್ಟ್ಯಾಟಿಸ್ಟಿಕ್ಸ್‌ / ಸ್ಟ್ಯಾಟಿಸ್ಟಿಕ್ಸ್‌ ಜತೆಗೆ ಅರ್ಥಶಾಸ್ತ್ರ / ಕ್ವಾಂಟಿಟೇಟಿವ್ ತಂತ್ರಗಳು, ಪ್ಯೂರ್ ಎಕನಾಮಿಕ್ಸ್‌, ಪ್ಯೂರ್ ಮ್ಯಾಥೆಮೆಟಿಕ್ಸ್‌, ಅರ್ಥಶಾಸ್ತ್ರ ಅಥವಾ ಕಂಪ್ಯೂಟರ್ ಸೈನ್ಸ್‌ ಯಾವುದಾದರೂ ಒಂದು ವಿಷಯದಲ್ಲಿ ಮಾಸ್ಟರ್‌ ಡಿಗ್ರಿ ಪಾಸ್‌ ಮಾಡಿರಬೇಕು.

ಅರ್ಜಿ ಶುಲ್ಕ : ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ರೂ.600.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.300.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50.
ಎಸ್‌ಸಿ / ಎಸ್‌ಟಿ / ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ರೂ.35 ರ ಅರ್ಜಿ ಪ್ರಕ್ರಿಯೆ ಶುಲ್ಕವನ್ನು ಎಲ್ಲ ಅಭ್ಯರ್ಥಿಗಳು ಕಡ್ಡಾಯವಾಗಿ ಪಾವತಿಸಬೇಕು.

ವಯೋಮಿತಿ : ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಪೂರೈಸಿರಬೇಕು.
ಗರಿಷ್ಠ 35 ವರ್ಷ ವಯೋಮಿತಿ ಮೀರಿರಬಾರದು.
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ವಯೋಮಿತಿ.
ಎಸ್‌ಸಿ / ಎಸ್‌ಟಿ / ಪ್ರ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಿತಿ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

Leave A Reply

Your email address will not be published.