PM Kisan : ರೈತರಿಗೆ ಸಿಹಿ ಸುದ್ದಿ: ಈ ದಿನಾಂಕಂದು ನಿಮ್ಮ ಖಾತೆಗೆ ಬರಲಿದೆ 12 ನೇ ಕಂತಿನ ಹಣ

ಅತಿ ಶೀಘ್ರದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮುಂದಿನ ಕಂತಿನ ಹಣ ರೈತರ ಖಾತೆಗೆ ಸೇರಲಿದೆ. ಈ ನಡುವೆ ಅಕ್ಟೋಬರ್ 17 ರಂದು ಪಿಎಂ ಕಿಸಾನ್ ಯೋಜನೆಯಡಿ 10 ಕೋಟಿಗೂ ಹೆಚ್ಚು ರೈತರಿಗೆ ಮೋದಿ ಸರ್ಕಾರ 16,000 ಕೋಟಿ ರೂ.ಗಳನ್ನು ರೈತರ ಖಾತೆಗೆ ಬಿಡುಗಡೆ ಮಾಡಲಿದೆ ಎಂದು ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ನೀವು ಸಹ 12 ನೇ ಕಂತಿಗಾಗಿ ಕಾಯುತ್ತಿದ್ದರೆ ಇದೊಂದು ಸಿಹಿ ಸುದ್ದಿ ಎಂದೇ ಹೇಳಬಹುದು.

2019 ರಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್) ಯೋಜನೆಯನ್ನು ಮೋದಿ ಪ್ರಾರಂಭ ಮಾಡಿಸದರು. ಈ ಯೋಜನೆಯಡಿ, 4 ಕಂತುಗಳಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಷಕ್ಕೆ ₹ 6000 ಮೊತ್ತವನ್ನು ನೇರವಾಗಿ ಬಿಡುಗಡೆ ಮಾಡಲಾಗುತ್ತದೆ. ಒಂದು ಹಣಕಾಸು ವರ್ಷದಲ್ಲಿ, ಪಿಎಂ ಕಿಸಾನ್ ನ ಕಂತನ್ನು ಮೂರು ಬಾರಿ ಬಿಡುಗಡೆ ಮಾಡಲಾಗುತ್ತದೆ ಮೊದಲನೆಯದನ್ನು ಏಪ್ರಿಲ್ ಮತ್ತು ಜುಲೈ ನಡುವೆ, ಎರಡನೆಯದನ್ನು ಆಗಸ್ಟ್ ಮತ್ತು ನವೆಂಬರ್ ನಡುವೆ ಮತ್ತು ಮೂರನೆಯದನ್ನು ಡಿಸೆಂಬರ್ 3 ಮತ್ತು ಮಾರ್ಚ್ ನಡುವೆ ವರ್ಗಾಯಿಸಲಾಗುತ್ತದೆ.

ನೀವು ಹಣವನ್ನು ಪಡೆಯುತ್ತೀರೋ ಇಲ್ಲವೋ ಎಂದು ಈ ರೀತಿ ಪರಿಶೀಲಿಸಿ ನೀವು ಪಿಎಂ ಕಿಸಾನ್ ಯೋಜನೆಗೆ ನೋಂದಾಯಿಸಿಕೊಂಡಿದ್ದರೆ, ಈ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಅಥವಾ ಇಲ್ಲವೇ ಎಂದು ನೀವು ತಿಳಿದುಕೊಳ್ಳುವುದು ಬಹಳ ಮುಖ್ಯ.

ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸಿ

  1. ಮೊದಲನೆಯದಾಗಿ, ನೀವು https://pmkisan.gov.in ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು.
  2. ಅದರ ಮುಖಪುಟದಲ್ಲಿ, ನೀವು ಫಾರ್ಮರ್ಸ್ ಕಾರ್ನರ್ ಆಯ್ಕೆಯನ್ನು ನೋಡುತ್ತೀರಿ.
    ಫಾರ್ಮರ್ಸ್ ಕಾರ್ನರ್ ವಿಭಾಗದಲ್ಲಿ, ನೀವು ಫಲಾನುಭವಿಗಳ ಪಟ್ಟಿಯ ಆಯ್ಕೆಯನ್ನು ಕ್ಲಿಕ್ ಮಾಡಬೇಕು.
  3. ನಂತರ ನೀವು ಡ್ರಾಪ್ ಡೌನ್ ಪಟ್ಟಿಯಿಂದ ರಾಜ್ಯ, ಜಿಲ್ಲೆ, ಉಪ-ಜಿಲ್ಲೆ, ಬ್ಲಾಕ್ ಮತ್ತು ಗ್ರಾಮವನ್ನು ಆಯ್ಕೆ ಮಾಡಬೇಕು.
    ಇದರ ನಂತರ, ನೀವು ಗೆಟ್ ರಿಪೋರ್ಟ್ ಅನ್ನು ಕ್ಲಿಕ್ ಮಾಡಬೇಕು. ಇದರ ನಂತರ, ಫಲಾನುಭವಿಗಳ ಸಂಪೂರ್ಣ ಪಟ್ಟಿ ಹೊರಬರುತ್ತದೆ, ಇದರಲ್ಲಿ ನೀವು ನಿಮ್ಮ ಹೆಸರನ್ನು ಪರಿಶೀಲಿಸಬಹುದು.

Leave A Reply

Your email address will not be published.