ತಡರಾತ್ರಿ ಭೀಕರ ಸರಣಿ ಅಪಘಾತ : 5 ಮಕ್ಕಳು ಸೇರಿದಂತೆ 9 ಜನರ ದಾರುಣ ಸಾವು

Share the Article

ಹಾಸನದಲ್ಲಿ ಸರಣಿ ಅಪಘಾತ ನಡೆದಿದ್ದು, ಭೀಕರ ದುರಂತವೊಂದು ಸಂಭವಿಸಿದೆ. ಕೆಎಸ್ ಆರ್ ಟಿಸಿ ಬಸ್, ಟಿಟಿ ವಾಹನ ಹಾಗೂ ಟ್ಯಾಂಕರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಇನ್ನೇನು ಸ್ವಾಮಿ ಮಂಜುನಾಥನ ದರ್ಶನ ಪಡೆದುಕೊಂಡು ಧನ್ಯರಾಗಿ ಮನೆ ಸೇರಿದರೆ ಸಾಕಪ್ಪ ಎನ್ನುವಷ್ಟರಲ್ಲೇ ಜವರಾಯ ಅಟ್ಟಹಾಸ ಮೆರೆದಿದ್ದಾನೆ.

ಹೌದು ಈ ಭೀಕರ ಅಪಘಾತದಲ್ಲಿ 9 ಮಂದಿ ದುರ್ಮರಣ ಹೊಂದಿದ್ದಾರೆ. ಪರಿಣಾಮ ಟೆಂಪೋ ಟ್ರಾವೆಲರ್‌ನಲ್ಲಿದ್ದ 5 ಮಕ್ಕಳು ಸೇರಿದಂತೆ ಒಟ್ಟು 9 ಜನರು ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಬಾಣವಾರ ಹೋಬಳಿ ಗಾಂಧಿ ನಗರ ಗ್ರಾಮದ ಬಳಿ ಶನಿವಾರ ತಡರಾತ್ರಿ ಈ ದುರಂತ ಸಂಭವಿಸಿದೆ.

ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಬಾಣವಾರ ಹೋಬಳಿ ಗಾಂಧಿ ನಗರ ಗ್ರಾಮದ ಬಳಿ ತಡರಾತ್ರಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, 5 ಮಕ್ಕಳು ಸೇರಿದಂತೆ 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 69 ರಲ್ಲಿ ಕೆಎಸ್‌ಆರ್‌ಟಿ ಬಸ್, ಟಿಟಿ ವಾಹನ ಹಾಗೂ ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಪರಿಣಾಮ ಟೆಂಪೋ ಟ್ರಾವೆಲರ್‌ನಲ್ಲಿದ್ದ 5 ಮಕ್ಕಳು ಸೇರಿದಂತೆ ಒಟ್ಟು 9 ಜನರು ಸಾವನ್ನಪ್ಪಿದ್ದಾರೆ. ಒಟ್ಟು ಟಿಟಿ ವಾಹನದಲ್ಲಿ 14 ಮಂದಿ ಧರ್ಮಸ್ಥಳಕ್ಕೆ ತೆರಳಿದ್ದರು. ಅಲ್ಲಿಂದ ವಾಪಸ್ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಲಾರಿ ಬಸ್ ಮಧ್ಯೆ ಸಿಲುಕಿ ಟಿಟಿ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಇನ್ನು ಘಟನೆಯಲ್ಲಿ ಗಾಯಗೊಂಡಿರುವವರನ್ನು ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಾಳಕ್ಕೆ ಬಾಣಾವರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತರ ವಿವರ

ಲೀಲಾವತಿ (50), ಚೈತ್ರಾ (33), ಸಮರ್ಥ (10), ಡಿಂಪಿ (12), ತನ್ಮಯ್ (10), ಧ್ರುವ (2), ವಂದನಾ (20), ದೊಡ್ಡಯ್ಯ (60), ಭಾರತಿ (50).

Leave A Reply

Your email address will not be published.