ನಯನತಾರ- ವಿಘ್ನೇಶ್ ಶಿವನ್ ಬಾಡಿಗೆ ತಾಯ್ತನ ಕೇಸ್‌ಗೆ ಅದ್ಭುತ ಟ್ವಿಸ್ಟ್ | ಅಷ್ಟಕ್ಕೂ ಈ ತಾರಾ ದಂಪತಿಯ ಮದುವೆ ನಡೆದದ್ದು ಯಾವಾಗ ಗೊತ್ತೇ?!!

ನಟಿ ನಯನತಾರ ಹಾಗೂ ವಿಘ್ನೇಶ್ ಶಿವನ್ ಅವರು ಬಾಡಿಗೆ ತಾಯ್ತನದ ಪ್ರಕರಣ ಭಾರೀ ರೋಚಕ ತಿರುವು ಪಡೆದುಕೊಂಡಿದೆ. ಅವಳಿ ಮಕ್ಕಳನ್ನು ಪಡೆದ ಬಗ್ಗೆ ನಯನತಾರ ಪತಿ ವಿಘ್ನೇಶ್ ಶಿವನ್ ಅ. 9ರಂದು ಟ್ವೀಟ್ ಕೂಡಾ ಮಾಡಿದ್ದು, ಇವರ ಎಲ್ಲಾ ಅಭಿಮಾನಿಗಳು ಪ್ರಶಂಸೆ ಕೊಡುವ ಭರದಲ್ಲೇ, ವಿವಾದ ಸೃಷ್ಟಿಯಾಗಿತ್ತು ಇದೆಲ್ಲಾ ಎಲ್ಲರಿಗೂ ತಿಳಿದಿರುವ ವಿಷಯ.

ಕಳೆದ ಜೂನ್ 2 ರಂದು ಮದುವೆಯಾದ ತಾರಾಜೋಡಿಗೆ 4 ತಿಂಗಳಲ್ಲಿ ಮಗು ಹೇಗೆ ಸಾಧ್ಯ ಎಂಬ ಪ್ರಶ್ನೆ ಇಡೀ ಅಭಿಮಾನಿ ಬಳಗ ಹಾಗೂ ಎಲ್ಲರೂ ಜೊತೆಗೆ ಸರಕಾರ ಕೂಡಾ ಇದರ ಬಗ್ಗೆ ಪ್ರಶ್ನೆ ಮಾಡಿತ್ತು.

ಬಾಡಿಗೆ ತಾಯ್ತನದ ಮೂಲಕ ಮಗು ಪಡೆದಿದ್ದಾರೆ ಎಂಬ ಸುದ್ದಿಯಾಗುತ್ತಲೇ, ಇವರು ಬಾಡಿಗೆ ತಾಯ್ತನದ ನಿಯಮಗಳನ್ನು ಈ ತಾರಾದಂಪತಿ ಗಾಳಿಗೆ ತೂರಿದ್ದಾರೆ ಎಂಬ ಮಾತು ಹರಿದಾಡತೊಡಗಿತು.

ಅನಂತರ ಈ ತಾರಾ ದಂಪತಿ ವಿರುದ್ಧ ದೂರು ಸಹ ದಾಖಲಾಯಿತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ತಮಿಳುನಾಡು ಸರ್ಕಾರ ಕೂಡಾ ತನಿಖೆಗಾಗಿ ತ್ರಿಸದಸ್ಯ ಸಮಿತಿಯನ್ನು ರಚಿಸಿ, ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕರ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿಯು ತನಿಖೆಯನ್ನು ಆರಂಭ ಕೂಡಾ ಮಾಡಿತು.

ಆದರೆ ಇಲ್ಲೊಂದು ರೋಚಕ ಟ್ವಿಸ್ಟ್ ಇದೆ.
ಮೂಲಗಳ ಪ್ರಕಾರ ನಯನತಾರ ಮತ್ತು ವಿಘ್ನೇಶ್ ಶಿವನ್ ಕಾನೂನುಬದ್ಧವಾದ ದಾಖಲೆಗಳನ್ನು ಸಲ್ಲಿಸಿದ್ದಾರೆಂದು ತಿಳಿದುಬಂದಿದೆ. ಅಂದರೆ, ದಂಪತಿ ಆರು ವರ್ಷಗಳ ಹಿಂದೆಯೇ ರಿಜಿಸ್ಟ್ರಾರ್ ಮದುವೆಯಾಗಿದ್ದು, ಇದಕ್ಕೆ ಸಂಬಂಧಿಸಿದ ಕಾನೂನಾತ್ಮಕ ದಾಖಲೆಗಳನ್ನು ಸಲ್ಲಿಸಿದ್ದಾರೆಂದು ಹೇಳಲಾಗಿದೆ.

ಇದಿಷ್ಟೇ ಅಲ್ಲದೆ, 2021ರಲ್ಲೇ ಬಾಡಿಗೆ ತಾಯ್ತನ ಒಪ್ಪಂದಕ್ಕೆ ದಂಪತಿ ಸಹಿ ಹಾಕಿರುವುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಹ ಸಲ್ಲಿಸಿದ್ದಾರೆ. ಹೀಗಾಗಿ ಇದರಲ್ಲಿ ಯಾವುದೇ ಅಕ್ರಮ ಇಲ್ಲ ಎಂದು ಹೇಳಲಾಗಿದೆ. ಕಳೆದ ಜೂನ್ 9ರಂದು ಸಾಂಪ್ರದಾಯಿಕವಾಗಿ ಮದುವೆ ನಡೆದಿದ್ದು, ಆದರೆ 6 ವರ್ಷಗಳ ಹಿಂದೆಯೇ ಇಬ್ಬರು ರಿಜಿಸ್ಟ್ರಾರ್ ಮದುವೆ ಆಗಿರುವುದಾಗಿ ದಾಖಲೆಗಳು ಹೇಳುತ್ತಿವೆ. ಇದೀಗ ಬಾಡಿಗೆ ತಾಯ್ತನದ ವಿವಾದ ತಾರ್ಕಿಕ ಅಂತ್ಯ ಕಾಣುವ ಎಲ್ಲಾ ಲಕ್ಷಣಗಳು ಇದೆ.

Leave A Reply