ಹನಿ ನೀರಾವರಿ ಘಟಕ ನಿರ್ಮಾಣ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಅತಿವೃಷ್ಟಿ ಹಾಗೂ ಅನಾವೃಷ್ಟಿ ಹೀಗೆ ಮಳೆ ಅನ್ನೋದು ರಾಜ್ಯದ ಅನ್ನದಾತರಿಗೆ ನೋವು ಕೊಡುತ್ತಿದೆ. ಹಾಗೆನೇ ಇನ್ನೊಂದೆಡೆ ರಾಜ್ಯದ ಕೆಲವು ಕಡೆ ಬರ ಕೂಡಾ ಹೆಚ್ಚಾಗಿ ಕಾಣುತ್ತಿದೆ. ಹಾಗಾಗಿ ಸರಕಾರ ರೈತರಿಗೆ ಬೇಸಿಗೆಯಲ್ಲಿ ತೊಂದರೆ ಆಗಬಾರದೆಂಬ ಕಾರಣದಿಂದ ಹನಿ ನೀರಾವರಿಗೆ ಸಹಾಯಧನವನ್ನು ಕೊಡಲು ನಿರ್ಧರಿಸಿದೆ.
ತೋಟಗಾರಿಕೆ ಇಲಾಖೆ ವತಿಯಿಂದ 2022-23ನೇ ಸಾಲಿನ ತೋಟಗಾರಿಕಾ ಕಾರ್ಯಕ್ರಮವಾದ ಹನಿ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳ್ಳಿಸಿದೆ.
ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸುವ ರೈತರಿಗೆ ಆಯಾ ಬೆಳೆಗಳು ಮತ್ತು ಬೆಳೆಗಳ ಅಂತರಕ್ಕನುಗುಣವಾಗಿ ಪರಿಹಾರವನ್ನು ನೀಡಲಾಗುವುದು:
1)ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ರೈತರಿಗೆ ಪ್ರಥಮ 2 ಹೆಕ್ಟೇರ್ ಗೆ ಮಾರ್ಗಸೂಚಿಯನ್ವಯ ನಿಗಧಿಪಡಿಸಿರುವ ವೆಚ್ಚದ ಶೇ.90ರಷ್ಟು
2) ಇತರೆ ವರ್ಗದ ರೈತರಿಗೆ ಶೇ.75ರಷ್ಟು ಸಹಾಯಧನವನ್ನು ನೀಡಲಾಗುವುದು.
3) 2 ಹೆಕ್ಟೇರ್ ಗೆ ಮೇಲ್ಪಟ್ಟು 5 ಹೆಕ್ಟೇರ್ ವರೆಗೆ ಶೇ.45ರಷ್ಟು ಸಹಾಯಧನವನ್ನು ನೀಡಲಾಗುವುದು.
4) ತರಕಾರಿ ಹಾಗೂ ವಾಣಿಜ್ಯ ಹೂ ಬೆಳೆಗಳಿಗೆ ಗರಿಷ್ಠ 2 ಹೆಕ್ಟೇರ್ ವರೆಗೆ ಸಹಾಯಧನವನ್ನು ನೀಡಲಾಗುವುದು.
5) ಸದರಿ ಸೌಲಭ್ಯವನ್ನು ಪ್ರತಿ ಫಲಾನುಭವಿಗೆ 5 ಹೆಕ್ಟೇರ್
ಪ್ರದೇಶದವರೆಗೆ ಮಿತಿಗೊಳಿಸಲಾಗಿದೆ.
ತೋಟಗಾರಿಕೆಯಲ್ಲಿ ಕೃಷಿ ಮಾಡುತ್ತಿರುವ ಹಾಗೂ ನೀರಾವರಿ ಮೂಲ ಹೊಂದಿರುವ ರೈತರು ತಮ್ಮ ಜಮೀನಿಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ಆಸಕ್ತಿ ಇದ್ದಲ್ಲಿ ತಮ್ಮ ಜಮೀನು ವ್ಯಾಪ್ತಿಯ ಹೋಬಳಿಯ ರೈತ ಸಂರಕ ಕೇಂದ್ರ/ ತಾಲ್ಲೂಕು ಕಛೇರಿಯ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ಹನಿ ನೀರಾವರಿ ಅಳವಡಿಸಲು ನಿಗಧಿತ ಅರ್ಜಿಯನ್ನು ಪಡೆಯುವುದು.
ಹನಿ ನೀರಾವರಿ ಅಳವಡಿಸಿಕೊಳ್ಳಲು ಆಸಕ್ತಿ ಇದ್ದಲ್ಲಿ ತಮ್ಮ ಜಮೀನು ವ್ಯಾಪ್ತಿಯ ಹೋಬಳಿಯ ರೈತ ಕೇಂದ್ರ/ ತಾಲ್ಲೂಕು ಕಛೇರಿಯ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ಹನಿ ನೀರಾವರಿ ಅಳವಡಿಸಲು ನಿಗದಿತ ಅರ್ಜಿಯನ್ನು ಪಡೆಯುವುದು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧೀನಕ್ಕೆ ಸೇರಿದ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು ಹನಿ ನೀರಾವರಿ ಘಟಕ ನಿರ್ಮಾಣ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ, ಸಂಬಂಧಿಸಿದ ತಾಲ್ಲೂಕು ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ನಿಮ್ಮ ಜಿಲ್ಲೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ.