ವರುಣಾರ್ಭಟ ಮುಂದುವರಿಕೆ | ಅ.16,17 ರಂದು ಕೂಡಾ ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ!!!

ರಾಜ್ಯದಲ್ಲಿ ವರುಣನಾರ್ಭಟ ಹೆಚ್ಚಾಗಿದ್ದು, ಇನ್ನೂ ಹೆಚ್ಚು ಮಳೆಯಾಗುವ ಸಂಭವವಿದೆ. ರಾಜ್ಯದಲ್ಲಿ ಮಳೆ ಮುಂದುವರಿದಿದ್ದು, ಭಾನುವಾರ ಮತ್ತು ಸೋಮವಾರ (ಅ.16, 17) ಕೂಡ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ.

ಬೆಳಗಾವಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ ಮತ್ತು ಮೈಸೂರು ಸೇರಿ 6 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ಕಲಬುರಗಿ, ಕೊಪ್ಪಳ, ವಿಜಯಪುರ, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಮಂಡ್ಯದ ಕೃಷಿ ವಿಜ್ಞಾನ ಕೇಂದ್ರದ ಬಳಿ ಭರ್ಜರಿ 17 ಸೆಂ.ಮೀ. ಮಳೆಯಾಗಿದೆ. ಮೈಸೂರಿನ ಟಿ. ನರಸೀಪುರ, ಚಾಮರಾಜನಗರದ ಕೊಳ್ಳೇಗಾಲದಲ್ಲಿ ತಲಾ 9 ಸೆಂ.ಮೀ. ಮಳೆಯಾಗಿದೆ. ಕಲಬುರಗಿಯ ಯಡ್ರಾಮಿ, ರಾಮನಗರದ ಕನಕಪುರದಲ್ಲಿ ತಲಾ 8 ಸೆಂ.ಮೀ. ಮಳೆಯಾಗಿದೆ. ಉಳಿದಂತೆ ರಾಜ್ಯದ ಹಲವೆಡೆ ಕೂಡ ಉತ್ತಮ ಮಳೆಯಾಗಿದೆ ಎಂದು ತಿಳಿಸಿದೆ.

Leave A Reply

Your email address will not be published.