BESCOM Recruitment 2022 : ಬೆಸ್ಕಾಂನಲ್ಲಿ ಉದ್ಯೋಗವಕಾಶ | ಒಟ್ಟು 400 ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ | ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರು ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ( BESCOM) 2022ನೇ ಸಾಲಿನ ನೇಮಕಾತಿ ಬಗ್ಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. BESCOM ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ನವೆಂಬರ್ 07, 2022 ಕೊನೆಯ ದಿನ.
ಹುದ್ದೆಯ ಬಗ್ಗೆ ಹೆಚ್ಚಿನ ವಿವರ ಈ ಕೆಳಗೆ ನೀಡಲಾಗಿದೆ.

ಸಂಸ್ಥೆ ಹೆಸರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ)
ಹುದ್ದೆ ಹೆಸರು: ಅಪ್ರೆಂಟಿಸ್
ಒಟ್ಟು ಹುದ್ದೆ: 400
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ವೇತನ : 8,000-9,000 ರೂ. ಪ್ರತಿ ತಿಂಗಳು ಸ್ಟೈಪೆಂಡ್

ಹುದ್ದೆಗಳ ವಿವರ : ಗ್ರಾಜುಯೇಟ್ ಮತ್ತು ಟೆಕ್ನಿಕಲ್ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಕರೆಯಲಾಗಿದೆ. ಆಯ್ಕೆಗೊಂಡವರು ಬೆಂಗಳೂರಿನಲ್ಲಿ ಕೆಲಸ ಮಾಡುವ ಅವಕಾಶ ಇರುತ್ತದೆ. ತರಬೇತಿ ಅವಧಿಯಲ್ಲಿ 8 ರಿಂದ 9 ಸಾವಿರ ರೂ. ವರೆಗೆ ಸ್ಟೈಪೆಂಡ್ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 15-10-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07- 11-2022

ಹುದ್ದೆ ಹೆಸರು- ಒಟ್ಟು ಹುದ್ದೆ
ಪದವೀಧರ ಅಪ್ರೆಂಟಿಸ್ (ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್): 143
ಪದವೀಧರ ಅಪ್ರೆಂಟಿಸ್ (ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಷನ್ ಇಂಜಿನಿಯರಿಂಗ್): 116
ಪದವೀಧರ ಅಪ್ರೆಂಟಿಸ್(ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್): 36
ಪದವೀಧರ ಅಪ್ರೆಂಟಿಸ್(ಇನ್ಸಾರ್ಮೇಷನ್ ಸೈನ್ಸ್ ಅಂಡ್ ಇಂಜಿನಿಯರಿಂಗ್) : 20
ಪದವೀಧರ ಅಪ್ರೆಂಟಿಸ್(ಸಿವಿಲ್ ಇಂಜಿನಿಯರಿಂಗ್): 5 ಪದವೀಧರ ಅಪ್ರೆಂಟಿಸ್(ಇನ್ನೊಮೆಂಟೇಷನ್
ಟೆಕ್ನಾಲಜಿ ಇಂಜಿನಿಯರಿಂಗ್): 5
ಟೆಕ್ನಿಷಿಯನ್ ಅಪ್ರೆಂಟಿಸ್ (ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್):55
ಟೆಕ್ನಿಷಿಯನ್ ಅಪ್ರೆಂಟಿಸ್ (ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಷನ್ ಇಂಜಿನಿಯರಿಂಗ್): 10
ಟೆಕ್ನಿಷಿಯನ್ ಅಪ್ರೆಂಟಿಸ್ (ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್): 10

ಒಟ್ಟು 400 ಹುದ್ದೆಗಳು.

ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಡಿಪ್ಲೋಮಾ, ಬಿ.ಇ/ಬಿ.ಟೆಕ್ ಪದವೀಧರ ಅಪ್ರೆಂಟಿಸ್: ಬಿ.ಇ/ಬಿ.ಟೆಕ್
ಟೆಕ್ನಿಷಿಯನ್ ಅಪ್ರೆಂಟಿಸ್: ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗರ 18 ವರ್ಷ ಕನಿಷ್ಠ ವಯೋಮಿತಿ ಇದೆ. ನಿಯಮದ ಪ್ರಕಾರ ಅರ್ಹರಿಗೆ ವಯೋಮಿತಿಯಲ್ಲಿ ವಿನಾಯತಿ ಸಿಗಲಿದೆ.

ಅರ್ಜಿ ಶುಲ್ಕ : ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ. ನೇಮಕಾತಿ ಪರೀಕ್ಷೆಯ ಅಂಕ, ದಾಖಲಾತಿಗಳ ಪರಿಶೀಲನೆ ಆಧಾರದ ಮೇಲೆ ಅಭ್ಯರ್ಥಿ ಆಯ್ಕೆ ನಡೆಯಲಿದೆ.

ಆಸಕ್ತರು ಬೆಸ್ಕಾಂ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಬೆಸ್ಕಾಂನ ಎನ್ಎಟಿಸ್ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಳ್ಳಲು ಅಧಿಕೃತ ವೆಬ್ ತಾಣ (https://portal.mhrdnats.gov.in/boat/login /user_login.action) ಅರ್ಜಿಗಳನ್ನು ಸಲ್ಲಿಕೆ ಮಾಡಬೇಕು.

ಶಾರ್ಟ್ ಲಿಸ್ಟ್‌ಗೊಂಡ ಅಭ್ಯರ್ಥಿಗಳ ಹೆಸರು ಪಟ್ಟಿ ನವೆಂಬರ್ 14ರಂದು ಪ್ರಕಟಿಸಲಾಗುತ್ತದೆ. ದಾಖಲಾತಿಗಳ ಪರಿಶೀಲನೆ ನವೆಂಬರ್ 21 ರಿಂದ 23ರ ತನಕ ಕಚೇರಿ ವೇಳೆಯಲ್ಲಿ ಬೆಳಗ್ಗೆ 11 ರಿಂದ 4 ಗಂಟೆಯ ತನಕ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 044-22542235, 080-22356756.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

Leave A Reply

Your email address will not be published.