BIGG NEWS: ಕರ್ನಾಟಕದಲ್ಲಿ ಮುಂದಿನ ನಾಲ್ಕೈದು ದಿನ ಭಾರಿ ಮಳೆ : ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ಚಳಿ ಪ್ರಮಾಣ ಭಾರೀ  ಏರಿಕೆ ಸಾಧ್ಯತೆ

0 13

ಬೆಂಗಳೂರು :  ಕರ್ನಾಟಕದಲ್ಲಿ  ಕಳೆದೆರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದ, ಜನರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗೊದೆ.  ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಮುಂದಿನ ನಾಲ್ಕೈದು ದಿನ ಭಾರಿ ಮಳೆಯಾಗಲಿದೆ. ಒಟ್ಟು 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆಯನ್ನು ಮಾಡಲಾಗಿದೆ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳ ಕಾಲ ಭಾರಿ ಮಳೆಯಾಗಲಿದೆ. ಅಕ್ಟೋಬರ್ 20ರಿಂದ 22ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ರಾಜಧಾನಿಯಲ್ಲಿ ಮುಂದಿನ ಎರಡ್ಮೂರು ದಿನ ಮಳೆಯಾಗಲಿದೆ. ಹಂತ ಹಂತವಾಗಿ ಚಳಿ ಪ್ರಮಾಣ ಕೂಡ ಭಾರೀ ಏರಿಕೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Leave A Reply