ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರ 2022 : SSLC/PUC ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ | ಅ.21 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

Share the Article

ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2022 ನೇ ಸಾಲಿನಲ್ಲಿ ನಡೆದ ಎಸ್‌. ಎಸ್‌.ಎಲ್‌.ಸಿ ಮತ್ತು ದ್ವಿತೀಯ ಪಿಯುಸಿ ಯ ವಾರ್ಷಿಕ ಪರೀಕ್ಷೆಗಳಲ್ಲಿ ಶೇ. 90 ಮತ್ತು ಅದಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2 ಎ, 3ಎ ಹಾಗೂ 3ಬಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಂದ, ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹತೆ ಮತ್ತು ಸೂಚನೆಗಳು :
• ಅಭ್ಯರ್ಥಿಗಳ ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ, ಪ್ರವರ್ಗ-1, ಅಭ್ಯರ್ಥಿಗಳಿಗೆ ವಾರ್ಷಿಕ 2.50 ಲಕ್ಷ ರೂ. ಹಾಗೂ 2 ಎ, 3ಎ ಹಾಗೂ 3ಬಿ ವರ್ಗದ ವಿದ್ಯಾರ್ಥಿಗಳಿಗೆ ಒಂದು ಲಕ್ಷ ರೂ.
• ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಯ ವಾರ್ಷಿಕ ಪರೀಕ್ಷೆಗಳಲ್ಲಿ ಶೇಕಡ. 90 ಮತ್ತು ಅದಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರಬೇಕು.
• ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
• ಹಿಂದುಳಿದ ವರ್ಗಗಳಾದ ಪ್ರವರ್ಗ-1, 2 ಎ, 3ಎ ಹಾಗೂ 3ಬಿ ಗೆ ಸೇರಿರಬೇಕು.
• ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 21,2022 ರ ಸಂಜೆ 5:00 ಗಂಟೆ ಆಗಿರುತ್ತದೆ.

ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು ;
ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಅಂಕಪಟ್ಟಿ.
ಆಧಾರ್ ಕಾರ್ಡ್‌ ಸ್ಕ್ಯಾನ್‌ ಕಾಪಿ.
ವಿದ್ಯಾರ್ಥಿಯ ಭಾವಚಿತ್ರ.
ಜಾತಿ ಪ್ರಮಾಣ ಪತ್ರ.
ಆದಾಯ ಪ್ರಮಾಣ ಪತ್ರ.
ಇತರೆ ಅಗತ್ಯ ಮಾಹಿತಿಗಳು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 21, 2022 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ https://bcwd.karnataka.gov.in ಗೆ ಸಂಪರ್ಕಿಸಬಹುದಾಗಿದೆ.

Leave A Reply

Your email address will not be published.