ಚಾಲೆಂಜ್ ನಲ್ಲಿ ಸೋತ ಗಡ್ಕರಿ | MP ಗೆ ನೀಡಲೇಬೇಕು ಈಗ ಬರೋಬ್ಬರಿ 32 ಸಾವಿರ ಕೋಟಿ!!!
ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಮಧ್ಯಪ್ರದೇಶದ ಸಂಸದರಿಗೆ ಸವಾಲು ಹಾಕಿದ್ದು , ಆಲ್ಲಿನ ಸಂಸದರು ಸವಾಲಿನಲ್ಲಿ ಗೆದ್ದಿರುವ ಕಾರಣ ಗಡ್ಕರಿಯವರು 32 ಸಾವಿರ ಕೋಟಿ ರೂ. ನೀಡಬೇಕಿದೆ.
ಹೌದು, ನಿತಿನ್ ಗಡ್ಕರಿ ಅವರ ಸವಾಲನ್ನು ಸ್ವೀಕರಿಸಿದ ಸಂದರೊಬ್ಬರು ತಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ಕೆಲವೇ ತಿಂಗಳುಗಳಲ್ಲಿ 32 ಕೆಜಿ ತೂಕವನ್ನು ಇಳಿಸಿಕೊಂಡಿದ್ದಾರೆ.
ಈ ವರ್ಷ ಫೆಬ್ರವರಿ ತಿಂಗಳಿನಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಗಡ್ಕರಿಯವರನ್ನು ಭೇಟಿಯಾಗಿದ್ದ ಉಜ್ಜಯಿನಿಯ ಸಂಸದ ಅನಿಲ್ ಫಿರೋಜಿಯಾ ಅವರು ಈ ವೇಳೆ ತಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ಸಂಸದರಾದ ಗಡ್ಕರಿ ಅವರಲ್ಲಿ ಅನುದಾನವನ್ನು ಬಿಡುಗಡೆ ಮಾಡುವಂತೆ ಕೇಳಿಕೊಂಡಿದ್ದಾರೆ.
ಆಗ ಗಡ್ಕರಿಯವರು ನೀವು ನಿಮ್ಮ ತೂಕವನ್ನು ಇಳಿಸಿಕೊಂಡರೆ, ತೂಕ ಇಳಿಸಿಕೊಳ್ಳುವ ಪ್ರತಿ ಕೆಜಿಗೆ 1,000 ಕೋಟಿ ರೂ. ಅನುದಾನ ಬಿಡುಗಡೆ ಮಾಡುತ್ತೇನೆ ಎಂದು ಸಾರಿಗೆ ಸಚಿವರಿ ಭರವಸೆ ನೀಡಿದ್ದಾರೆ.
ಫಿರೋಜಿಯಾ ಅವರು ಜೂನ್‌ನಲ್ಲಿಯೇ 15 ಕೆಜಿ ತೂಕವನ್ನು ಇಳಿಸಿಕೊಂಡು ಪ್ರಧಾನಿ ನರೇಂದ್ರ ಮೋದಿ ಅವರ ಫಿಟ್ ಇಂಡಿಯಾ ಆಂದೋಲನದ ವೇಳೆ ಮಾತನಾಡಿದ್ದಾಗ ಗಡ್ಕರಿ ನೀಡಿದ ಚಾಲೆಂಜ್ ಬಗ್ಗೆ ತಿಳಿಸಿದ್ದರು.
ನಾನು ಕಳೆದುಕೊಳ್ಳುವ ಪ್ರತಿ ಕೆಜಿಗೆ ಗಡ್ಕರಿಯವರು 1,000 ಕೋಟಿ ರೂ. ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಹಾಗಾಗಿ, ಈಗಾಗಲೇ 15 ಕೆಜಿ ಕಳೆದುಕೊಂಡಿದ್ದೇನೆ.
ತಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ತಾನು ಇನ್ನಷ್ಟು ತೂಕವನ್ನು ಕಳೆದುಕೊಳ್ಳುತ್ತೇನೆ. ತಾನು ತೂಕ ಇಳಿಸಿಕೊಳ್ಳುವುದರಿಂದ ಉಜ್ಜಯಿನಿಗೆ ಹೆಚ್ಚಿನ ಅನುದಾನ ಸಿಗುತ್ತದೆಯಾದರೆ ಅದಕ್ಕಾಗಿ ಫಿಟ್‌ನೆಸ್ ಆಡಳಿತ ಮುಂದುವರೆಸಲು ಸಿದ್ಧ ಎಂದಿದ್ದಾರೆ.
ಗಡ್ಕರಿ ಅವರು ಚಾಲೆಂಜ್ ಮಾಡಿದ ಸಂದರ್ಭದಲ್ಲಿ 135 ಕೆಜಿ ಇದ್ದ ಸಂಸದರು, ತಮ್ಮ ಕ್ಷೇತ್ರಕ್ಕಾಗಿ ವರ್ಕೌಟ್, ಡಯಟ್ ಮಾಡಿ ಇದೀಗ 32 ಕೆಜಿ ತೂಕವನ್ನು ಇಳಿಸಿಕೊಂಡಿದ್ದು, ಇದೀಗ ಸಂಸದರು 93 ಕೆಜಿ ತೂಕ ಹೊಂದಿದ್ದು, ಗಡ್ಕರಿಯವರ ಚಾಲೆಂಜ್ ಅನ್ನು ಯಶಸ್ವಿಯಾಗಿ ಗೆದ್ದಿದ್ದಾರೆ.
ಫಿರೋಜಿಯಾ ಅವರು ಇತ್ತೀಚೆಗೆ ಸಂದರ್ಶನದಲ್ಲಿ ಮಾತನಾಡಿ, ತಾವು 32 ಕೆಜಿ ಕಳೆದುಕೊಂಡಿರುವುದರ ಬಗ್ಗೆ ತಿಳಿಸಿದ್ದರು.
ಗಡ್ಕರಿ ತಾವು ನೀಡಿದ್ದ ಭರವಸೆಯನ್ನು ಈಡೇರಿಸಿದ್ದು, 2,300 ಕೋಟಿ ರೂ. ವೆಚ್ಚದ ಪ್ರದೇಶ ಅಭಿವೃದ್ಧಿ ಯೋಜನೆಯನ್ನು ಅನುಮೋದಿಸಿದ್ದಾರೆ ಎಂದು ತಿಳಿಸಿದ್ದಾರೆ.