ಬೇರೊಂದು ಶಾಲೆಗೆ ನಿಯೋಜನೆ ಮಾಡಲು ಲಂಚ ಸ್ವೀಕಾರ | ಲೋಕಾಯುಕ್ತ ಬಲೆಗೆ ಬಿದ್ದ ಶಿಕ್ಷಣಾಧಿಕಾರಿ

ಚಿಕ್ಕಮಗಳೂರು : ಶಾಲೆಯೊಂದಕ್ಕೆ ನಿಯೋಜನೆ ಮಾಡಲು ಶಿಕ್ಷಕರೊಬ್ಬರಿಂದ ಲಂಚ ಪಡೆಯುತ್ತಿದ್ದಾಗ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕಡೂರು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎನ್ ಜಯಣ್ಣ ಲೋಕಾಯುಕ್ತ ಬಲೆಗೆ ಬಿದ್ದವರು.

ಶಿಕ್ಷಕ ಎನ್.ಎಸ್ ರಾಜಪ್ಪ ಅವರಿಂದ 15 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಕ್ಷೇತ್ರ ಶಿಕ್ಷಣಾಕಾರಿ ಕೆ.ಎನ್ ಜಯಣ್ಣ ಅವರನ್ನು ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕರಾದ ಸಚಿನ್ ಮತ್ತು ಬಿ.ಮಲ್ಲಿಕಾರ್ಜುನ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.

ಕಡೂರಿನ ಜಿ.ತಿಮ್ಮಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿಯೋಜನೆ ಮೇರೆಗೆ ಕರ್ತವ್ಯದಲ್ಲಿದ್ದ ರಾಜಪ್ಪ ಅವರನ್ನು ಗರ್ಜೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಿಯೋಜನೆ ಮಾಡಲು ಕ್ಷೇತ್ರ ಶಿಕ್ಷಣಾಕಾರಿಗಳು ಹಣದ ಬೇಡಿಕೆ ಇಟ್ಟಿದ್ದು, ಮಂಗಳವಾರ ಈ ಸಂಬಂಧ ಶಿಕ್ಷಕ ರಾಜಪ್ಪ ಅವರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಜಿ.ತಿಮ್ಮಾಪುರ ಗೇಟ್‌ನಲ್ಲಿ 15 ಸಾವಿರ ಲಂಚ ನೀಡುವಾಗ ಸಿಕ್ಕಿಬಿದ್ದಿದ್ದಾರೆ.

Leave A Reply

Your email address will not be published.