Vidyasiri Scholarship : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ | ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ!!!

ವಿದ್ಯಾಸಿರಿ ಯೋಜನೆಯು ವಿದ್ಯಾರ್ಥಿಗಳಿಗೆ ಅನುಕೂಲ ಆಗುವ ನಿಟ್ಟಿನಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಮುಂದೂಡಲಾಗಿದೆ. ಅಂದರೆ ಸರ್ವರ್ ಸಮಸ್ಯೆಯಿಂದ ಹಲವಾರು ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅಸಾಧ್ಯ ಆದ ಕಾರಣ ಮತ್ತು ಅರ್ಹವಿರುವ ಪ್ರತಿಯೊಬ್ಬ ವಿದ್ಯಾರ್ಥಿಯು ಈ ಸೌಲಭ್ಯ ಪಡೆಯುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಅಲ್ಪಸಂಖ್ಯಾತಸಮುದಾಯದ ಪಿಯುಸಿ ಹಾಗೂ ಪದವಿ ವಿದ್ಯಾರ್ಥಿಗಳು ಇದೀಗ ಪ್ರಸ್ತುತ 2022-23 ನೇ ಸಾಲಿನ ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ( Vidyasiri Scholarship) ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 15 ರವರೆಗೆ ವಿಸ್ತರಿಸಲಾಗಿದೆ.

ಅರ್ಜಿಸಲ್ಲಿಸಲು ಬೇಕಾಗುವ ದಾಖಲೆಗಳು:

  • ಎಸ್. ಎಸ್. ಎಲ್. ಸಿ. ಅಂಕಪಟ್ಪಿ
  • ದೂರ ದೃಢೀಕರಣ ಪತ್ರ.
  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಪುಸ್ತಕ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಪಿಯುಸಿ / ಸೆಮಿಸ್ಟರ್ ಅಂಕಪಟ್ಪಿ.
  • ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ 1
  • ಶಾಲಾ ಶುಲ್ಕದ ರಶೀದಿ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15/11/2022 ಆಗಿರುತ್ತದೆ , ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಆಯಾ ತಾಲೂಕಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಭೇಟಿ ನೀಡಬಹುದಾಗಿದೆ.

ಮುಖ್ಯವಾಗಿ ಮನೆಯಿಂದ ಕಾಲೇಜಿಗೆ 5 ಕಿ. ಮೀ. ದೂರ ಇರುವ ಸರ್ಕಾರಿ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಪಡೆಯದೆ ಇರುವ ಅಲ್ಪಸಂಖ್ಯಾತ ಸಮುದಾಯದ ಕಾಲೇಜು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

Leave A Reply

Your email address will not be published.