SayCm Campaign:’ಪೇ ಸಿಎಂ’ ಆಯಿತು ಈಗ ‘ಸೇ ಸಿಎಂ’ : ಬಿಜೆಪಿ ವಿರುದ್ಧ ಕಾಂಗ್ರೆಸ್ ನ ಹೊಸ ಅಭಿಯಾನ ಶುರು

Share the Article

ಕರ್ನಾಟಕ ಕಾಂಗ್ರೆಸ್ ಸರಕಾರ ಮಂಗಳವಾರ ‘ ಸೇ ಸಿಎಂ’ ಎಂಬ ಹೊಸ ಅಭಿಯಾನವನ್ನು ಆರಂಭಿಸಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಈಡೇರದ ಭರವಸೆಗಳ ಬಗ್ಗೆ ಉತ್ತರಿಸುವಂತೆ ಈ ಅಭಿಯಾನ ಕೈಗೊಂಡಿದೆ ಕಾಂಗ್ರೆಸ್. 2018ರ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ನೀಡಿದ ಭರವಸೆಗಳ ಬಗ್ಗೆ ರಾಜ್ಯದ ಜನತೆಗೆ ಉತ್ತರ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

“ಪೇಸಿಎಂ ಈಗ ಸೇಸಿಎಂ ಆಗಲಿ, ರಾಜ್ಯದ ಜನತೆಗೆ ಉತ್ತರ ನೀಡಲಿ. ಚುನಾವಣೆಗೂ ಮೊದಲು ನೀಡಿದ ಭರವಸೆಗಳನ್ನು ಮರೆತು ವಚನಭ್ರಷ್ಟರಾದ ಕರ್ನಾಟಕ ಬಿಜೆಪಿ ರಾಜ್ಯದ ಜನತೆಗೆ ಉತ್ತರ ನೀಡಬೇಕಿದೆ” ಎಂದು ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದೆ ಕಾಂಗ್ರೆಸ್.

ಇದರ ಜೊತೆಗೆ “ತಮ್ಮದೇ ಪಕ್ಷದ ಪ್ರಣಾಳಿಕೆಯ ಭರವಸೆಗಳ ಬಗ್ಗೆ ಮಾತಾಡಲು ಕೂಡ 40% ಕಮಿಷನ್ ನೀಡಬೇಕೆ ಸಿಎಂ ಬಸವರಾಜ ಬೊಮ್ಮಾಯಿ ಅವರೇ?” ಎಂದು ವ್ಯಂಗ್ಯ ಬೇರೆ ಮಾಡಿದೆ. ಇದರ ಜೊತೆಗೆ ಕಾಂಗ್ರೆಸ್ ಈ ಹಿಂದೆ ಆರಂಭಿಸಿದ್ದ ‘40% ಸರ್ಕಾರ’ ವೆಬ್‌ಸೈಟ್‌ಗೆ ಲಿಂಕ್ ಆಗುವ ಕ್ಯೂಆರ್‌ ಕೋಡ್ ಹಾಕಿ, ನಿಮ್ ಹತ್ರ ಇದ್ಯಾ ಉತ್ತರ ಎಂಬ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದೆ.

” 550 ಭರವಸೆಗಳನ್ನು ತನ್ನ ಪ್ರಣಾಳಿಕೆಯಲ್ಲಿ ‌ನೀಡಿದ್ದ ಬಿಜೆಪಿ, ಅದರಲ್ಲಿ ಇದುವರೆಗೂ ನಾವು ಬಿಜೆಪಿ ನೀಡಿದ ಭರವಸೆಗಳ ಬಗ್ಗೆ 50 ಪ್ರಶ್ನೆಗಳನ್ನು ಕೇಳಿದ್ದೇವೆ. ಆದರೆ, ಕರ್ನಾಟಕ ಬಿಜೆಪಿ ನೀಡಿದ ಉತ್ತರ – 0. ತಮ್ಮದೇ ಪ್ರಣಾಳಿಕೆಯಲ್ಲಿನ ಅಂಶಗಳ ಬಗ್ಗೆ ಬಿಜೆಪಿಗೆ ಮಾತನಾಡುವ ಧೈರ್ಯವಿರದಿರುವುದು ಸರ್ಕಾರದ ವಿಫಲತೆಗೆ ನಿದರ್ಶನ” ಎಂದು ಕಾಂಗ್ರೆಸ್ ಟೀಕೆ ಮಾಡಿದೆ.

ಸೆಪ್ಟೆಂಬರ್‌ನಲ್ಲಿ, ಕಾಂಗ್ರೆಸ್ ರಾಜ್ಯದಲ್ಲಿ PayCM ಅಭಿಯಾನವನ್ನು ಪ್ರಾರಂಭಿಸಿತ್ತು. ಅದರಲ್ಲಿ ಸಿಎಂ ಬೊಮ್ಮಾಯಿ ಅವರ ಫೋಟೋದೊಂದಿಗೆ ಕ್ಯೂಆರ್ ಕೋಡ್ ಅನ್ನು ಹಾಕಿತ್ತು. ಈಗ ಅದರ ಮುಂದುವರಿದ ಭಾಗವಾಗಿ ಸೇಸಿಎಂ ಅಭಿಯಾನ ಕೈಗೊಂಡಿದೆ ಕಾಂಗ್ರೆಸ್.

Leave A Reply