Kharge Congress President | ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಗೆಲುವು!

ಎಐಸಿಸಿ ಅಧ್ಯಕ್ಷ (Congress President) ಸ್ಥಾನಕ್ಕೆ ಅಕ್ಟೋಬರ್ 17ರಂದು ನಡೆದಿದ್ದ ಚುನಾವಣೆಯ ಫಲಿಂತಾಶ ಹೊರ ಬಿದ್ದಿದ್ದು, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪ್ರತಿಸ್ಪರ್ಧಿ ಶಶಿ ತರೂರ್ ಸೋಲು ಕಂಡಿದ್ದಾರೆ.

ಕಾಂಗ್ರೆಸ್​ ಪಕ್ಷದ ಅಧ್ಯಕ್ಷ ಗಾದಿ ಗಾಂಧಿ ಕುಟುಂಬದಿಂದ ಬೇರೆಯವರ ಪಾಲಾಗಿದೆ. ಹೌದು, ಕಳೆದ 20 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಈ ಕುಟುಂಬದ ಹೊರಗಿನವರು ಅಧ್ಯಕ್ಷ ಗಾದಿಗೆ ಸ್ಪರ್ಧಿಸಿದ್ದಾರೆ. ಬಹಳ  ಅವಧಿಯಿಂದ ಕಾಂಗ್ರೆಸ್ ಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜು ಖರ್ಗೆ ಅವರು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಈ ಕುರಿತು ಅಧಿಕೃತ ಘೋಷಣೆ ಪ್ರಕಟವಾಗಿದೆ.

ಇದಕ್ಕೂ ಮೊದಲು ಜೆ.ಬಿ.ಕೃಪಲಾನಿ (1947), ಪಟ್ಟಾಭಿ ಸೀತಾರಾಮಯ್ಯ (1948-49) ಮತ್ತು ಪುರುಷೋತ್ತಮ್ ದಾಸ್ ಟಂಡನ್ (1950), ಪಿ.ವಿ.ನರಸಿಂಹರಾವ್ (1992-1994), ಸೀತಾರಾಮ್ ಕೇಸರಿ (1996-98) ಎಐಸಿಸಿ ಅಧ್ಯಕ್ಷರಾಗಿದ್ದರು.

ಅಖಿಲ ಭಾರತ ಕಾಂಗ್ರೆಸ್​ ಸಮಿತಿ (All India Congress Committee – AICC) ಅಧ್ಯಕ್ಷ ಸ್ಥಾನಕ್ಕೆ ಅ 17ರಂದು ಮತದಾನ ನಡೆದಿತ್ತು. ಕಾಂಗ್ರೆಸ್ ಪಕ್ಷದ 9,500 ಪ್ರತಿನಿಧಿಗಳು ಮತ ಚಲಾಯಿಸಿದ್ದರು. ಮತದಾನದ ಪ್ರಮಾಣ ಶೇ 96ರಷ್ಟಿತ್ತು. ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ (Mallikarju Kharge) ಮತ್ತು ಶಶಿ ತರೂರ್ (Shashi Tharoor)​ ಅಧ್ಯಕ್ಷ ಗಾದಿಗೆ ಸ್ಪರ್ಧಿಸಿದ್ದರು. ತರೂರ್ ಅವರಿಗೆ 1072 ಮತಗಳು ಲಭಿಸಿಸಿದ್ದರೆ, ಖರ್ಗೆ ಅವರು 7897 ಮತಗಳನ್ನು ಪಡೆದುಕೊಂಡಿದ್ದಾರೆ.

Leave A Reply

Your email address will not be published.