ರಾಜ್ಯದಲ್ಲೊಂದು ಬೆಚ್ಚಿಬೀಳಿಸುವ ಘಟನೆ | SSLC ವಿದ್ಯಾರ್ಥಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

Share the Article

ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. SSLC ವಿದ್ಯಾರ್ಥಿಯೋರ್ವನನ್ನು ಮಾರಕಾಸ್ತ್ರಗಳಿಂದ ಇರಿದು ಕೊಚ್ಚಿ ಕೊಲೆ ಮಾಡಿದ ಘಟನೆಯೊಂದು ನಡೆದಿದೆ. ಬೆಳಗಾವಿ ನಗರದಲ್ಲಿ ( Belagavi City) ಈ ಘಟನೆ ನಡೆದಿದೆ. ಬೆಳಗಾವಿಯಲ್ಲಿ ಎಸ್ ಎಸ್ ಎಲ್ ಸಿ ಓದುತ್ತಿದ್ದಂತ ವಿದ್ಯಾರ್ಥಿಯನ್ನು ( SSLC Student ) ಮಾರಕಾಸ್ತ್ರಗಳಿಂದ ಇರಿದು ಕೊಚ್ಚಿ ಕೊಲೆ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ ಬಳಿಯಲ್ಲಿ ನಿನ್ನೆಯ ರಾತ್ರಿ ಈ ಘಟನೆ ನಡೆದಿದೆ.

ಬೆಳಗಾವಿಯ ಖಾಸಗಿ ಶಾಲೆಯೊಂದರಲ್ಲಿ ಎಸ್ ಎಸ್ ಎಲ್ ಸಿ ಓದುತ್ತಿದ್ದ ಪ್ರಜ್ವಲ್ ಶಿವಾನಂದ ಕರಿಗಾರ(16) ಎಂಬಾತ ನಿನ್ನೆಯಿಂದ ಕಾಣೆಯಾಗಿರುವ ಬಗ್ಗೆ ಬೆಳಗಾವಿಯ ಕ್ಯಾಂಪ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿತ್ತು.

ಆದರೆ ಕಳೆದ ರಾತ್ರಿ ಯಾರೋ ದುರ್ಷರ್ಮಿಗಳು ಪ್ರಜ್ವಲ್ ನನ್ನು ಮಾರಕಾಸ್ತ್ರಗಳಿಂದ ಇರಿದು, ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ‌. ಈ ಹತ್ಯೆಗೆ ನಿಖರ ಕಾರಣವೇನು ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ಮತ್ತಷ್ಟು ಮಾಹಿತಿ ತಿಳಿದು ಬರಬೇಕಿದೆ.

Leave A Reply