ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋ ಸಾಗಾಟ ತಾತ್ಕಾಲಿಕ ನಿಷೇಧ!! ಜಿಲ್ಲಾಡಳಿತದ ಆದೇಶ-ಕಾರಣ ಇಲ್ಲಿದೆ!
ಮಂಗಳೂರು: ರಾಜ್ಯದ ಕೆಲವೆಡೆಗಳಲ್ಲಿ ಜಾನುವಾರುಗಳಲ್ಲಿ ಕಂಡುಬರುವ ಚರ್ಮಗಂಟು ರೋಗ ಹೆಚ್ಚಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜಾನುವಾರು ಸಾಗಾಟಕ್ಕೆ ತಾತ್ಕಾಲಿಕ ನಿಷೇಧ ಹೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಚರ್ಮಗಂಟು ರೋಗವು ಒಂದು ಗೋವಿನಿಂದ ಇನ್ನೊಂದಕ್ಕೆ ವೇಗವಾಗಿ ಹರಡುವ ಖಾಯಿಲೆಯಾಗಿದ್ದು, ಈಗಾಗಲೇ ಹಲವು ಪ್ರಕರಣಗಳು ವರದಿಯಾದ ಬೆನ್ನಲ್ಲೇ ದ.ಕ ಜಿಲ್ಲಾಡಳಿತ ಎಚ್ಚೆತ್ತು ಮುಂಜಾಗ್ರತ ಕ್ರಮವನ್ನು ಜಾರಿಗೊಳಿಸಲಾಗಿದೆ.ಅಲ್ಲದೇ ಈ ರೋಗದಿಂದ ಜಾನುವಾರುಗಳು ಸಾವನ್ನಪ್ಪುವ ಸಾಧ್ಯತೆ ಹೆಚ್ಚಿದ್ದು, ಹೊರ ರಾಜ್ಯ ಅಥವಾ ಹೊರ ಜಿಲ್ಲೆಗಳಿಂದ ದ.ಕ ಜಿಲ್ಲೆಗೆ ನವೆಂಬರ್ ತಿಂಗಳ ಅಂತ್ಯದವರೆಗೆ ಜಾನುವಾರು ಸಾಗಾಟ ನಡೆಸದಿರಲು ಆದೇಶಿಸಲಾಗಿದೆ.
ಚರ್ಮಗಂಟು ರೋಗದ ನಿಯಂತ್ರಣಕ್ಕೆ ಬೇಕಾದ ಪ್ರಯೋಗಳನ್ನು ಈಗಾಗಲೇ ಜಾರಿಗೆ ತರಲಾಗಿದ್ದು,ಆರೋಗ್ಯವಂತ ಜಾನುವಾರುಗಳ ಹಿತ ದೃಷ್ಠಿಯಿಂದ ಗ್ರಾಮದಲ್ಲಿ ಮುಂಜಾಗ್ರತ ಕ್ರಮವಾಗಿ ಗ್ರಾಮದ ಪಂಚಾಯತ್ ವ್ಯಾಪ್ತಿಯಲ್ಲಿ ನೊಣ-ಸೊಳ್ಳೆಗಳ ಕಡಿವಾಣಕ್ಕೆ ಫಾಗಿಂಗ್ ಮಾಡಲು ಕ್ರಮ ಕೈಗೊಳ್ಳಲಾಗಿದೆ.