ಮದರಸಾಗಳಲ್ಲಿ ಇನ್ನು ಮುಂದೆ ಹೊಸ ಶಿಕ್ಷಣ ಪದ್ಧತಿ ಜಾರಿ

ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರ ವಿಶೇಷ ಗಮನ ಹರಿಸಿ ಯಾವುದೇ ವಿದ್ಯಾರ್ಥಿ ಶಿಕ್ಷಣದಿಂದ ವಂಚಿತರಾಗದಂತೆ ಅನೇಕ ಕ್ರಮಗಳನ್ನು ಕೈಗೊಂಡಿದೆ.

ಅದೇ ರೀತಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಉಚಿತ ಶಿಕ್ಷಣ, ಆರ್ಥಿಕ ನೆರವನ್ನು ನೀಡುವುದು ತಿಳಿದಿರುವ ವಿಚಾರ. ಈ ನಡುವೆ ರಾಜ್ಯ ಸರ್ಕಾರ ಹೊಸ ತೀರ್ಮಾನ ಕೈಗೊಳ್ಳಲು ಮುಂದಾಗಿದೆ.

ರಾಜ್ಯದ ಮದರಸಾಗಳಲ್ಲಿ ಮಕ್ಕಳಿಗೆ ಹೊಸ ಶಿಕ್ಷಣ ಪದ್ಧತಿಯಂತೆ ಬೋಧಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಹಾಗಾಗಿ ಅತಿ ಶೀಘ್ರದಲ್ಲಿಯೆ ಮದರಸಾಗಳಲ್ಲಿ ಹೊಸ ಶಿಕ್ಷಣ ಪದ್ಧತಿ ಜಾರಿಯಾಗುವ ಸಾಧ್ಯತೆಯಿದೆ.

ಮದರಸಾಗಳಲ್ಲಿ ರಾಜ್ಯ ಶಿಕ್ಷಣ ಇಲಾಖೆ ವ್ಯಾಪ್ತಿಗೆ ತರಲು ಚಿಂತನೆಗಳು ನಡೆಯುತ್ತಿದ್ದು, ಮದರಸಾಗಳಲ್ಲಿ ಮಕ್ಕಳಿಗೆ ಇತಿಹಾಸ, ಗಣಿತ ಬೋಧನೆ ಮಾಡಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಳ್ಳುವ ಕುರಿತು ಚಿಂತನೆ ನಡೆಸುತ್ತಿದೆ.

ಹಾಗಾಗಿ ಸದ್ಯದಲ್ಲಿಯೇ ಇದರ ಕುರಿತಾಗಿ ಅಂತಿಮ ತೀರ್ಮಾನ ಕೈಗೊಂಡು ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ.

ಅಲ್ಪಸಂಖ್ಯಾತ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಸದುದ್ದೇಶದಿಂದ ಮದರಸಾಗಳಲ್ಲಿ ಹೊಸ ಶಿಕ್ಷಣ ಪದ್ಧತಿ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ.

ಮುಂದಿನ ದಿನಗಳಲ್ಲಿ ಮದರಸಾಗಳಲ್ಲಿ ಹೊಸ ಶಿಕ್ಷಣ ಪದ್ಧತಿಯನ್ನು ಜಾರಿಗೆ ತರಲು ಪೂರ್ವ ಸಿದ್ಧತೆಗಳು ನಡೆಯುತ್ತಿವೆ.

Leave A Reply

Your email address will not be published.