BIGG NEWS : ನಿಷೇಧದ ನಂತರವೂ PFIನಿಂದ ದುಷ್ಕೃತ್ಯಕ್ಕೆ ಸಂಚು: ಮಂಗಳೂರಿನಲ್ಲಿ ಐವರು ಅರೆಸ್ಟ್

ಮಂಗಳೂರು : ಕೇಂದ್ರ ಸರಕಾರ ಪಿಎಫ್‌ಐ ಸಂಘಟನೆಯನ್ನು ಇತ್ತೀಚೆಗಷ್ಟೇ ನಿಷೇಧ ಮಾಡಿದ್ದರೂ, ಯಾವುದೇ ಸದ್ದಿಲ್ಲದೇ ಸಂಚು ರೂಪಿಸುತ್ತಿದ್ದ, ಪಿಎಫ್‌ಐಗೆ ಸೇರಿದ ಐವರನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ.

 

ಬಂಧಿತ ಐವರನ್ನು ವಿಚಾರಣೆ ನಡೆಸಲಾಗುತ್ತಿದ್ದು, ಅದರಲ್ಲೂ ವಿಶೇಷವಾಗಿ ಈ ಆರೋಪಿಗಳಿಗೆ ಯಾರ ಜೊತೆ ಸಂಪರ್ಕ ಇತ್ತು ಹಾಗೂ ಎಲ್ಲೆಲ್ಲಿ ತರಬೇತಿ ನೀಡುತ್ತಿದ್ದರು, ಯಾವ ರೀತಿ ಸಂಚು ರೂಪಿಸಿದ್ದರು ಇತ್ಯಾದಿ ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹಾಸನದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

ಕಾನೂನು ಇತಿಮಿಯಲ್ಲಿ ಪ್ರತಿಭಟನೆ ಮಾಡಿದರೆ ನಮ್ಮ ಕಡೆಯಿಂದ ತಡೆ ಇರುವುದಿಲ್ಲ. ಕಾನೂನು ಮೀರಿ ಯಾರಾದರೂ ಪ್ರತಿಭಟನೆ ಮಾಡಿದರೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಮಾತನ್ನು ಕೂಡಾ ಅವರು ಹೇಳಿದರು.

ಪಿಎಫ್‌ಐ ಸಂಘಟನೆ ಬ್ಯಾನ್ ಆಗಿದ್ದರೂ ನಾವು ಅವರ ಮೇಲೆ ನಾವು ಕಣ್ಣು ಇಟ್ಟಿದ್ದೇವೆ. ಕರಾವಳಿ ಭಾಗವಾದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಮೈಸೂರು, ದಾವಣಗೆರೆ ಸೇರಿದಂತೆ ಇನ್ನಿತರ ಕಡೆಗಳಲ್ಲಿ ನಮ್ಮ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಹಾಗೆನೇ, ಪುತ್ತೂರಿನಲ್ಲಿ ನಡೆಯುತ್ತಿದ್ದ ತರಬೇತಿ ಬಿಟ್ಟು ಬೇರೆ ಬೇರೆ ಕಡೆ ಎಲ್ಲೆಲ್ಲಿ ತರಬೇತಿ ನಡೆಯುತ್ತಿದೆ ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದು ಅಲೋಕ್ ಕುಮಾರ್ ಹೇಳಿದರು.

Leave A Reply

Your email address will not be published.