KPSC Exam Time Table 2022 : ಕೆಪಿಎಸ್ ಸಿ ಯಿಂದ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ!!!
ಕರ್ನಾಟಕ ಪಬ್ಲಿಕ್ ಸರ್ವೀಸ್ ಕಮಿಷನ್ (KPSC) 2022 ರ ಮಾರ್ಚ್‌ನಲ್ಲಿ ಅಧಿಸೂಚಿಸಿದ್ದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ ಗ್ರೇಡ್-1 ಹುದ್ದೆಗಳು, ವಿವಿಧ ಗ್ರೂಪ್ ಸಿ ಹುದ್ದೆಗಳು, ಪೊಲೀಸ್ ಇಲಾಖೆಯಲ್ಲಿನ ನ್ಯಾಯ ವಿಜ್ಞಾನ ಪ್ರಯೋಗಾಲಯಗಳಲ್ಲಿನ ಗ್ರೂಪ್ ಎ ವೃಂದದ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಇದೀಗ ನೇಮಕಾತಿ ಪ್ರಕ್ರಿಯೆಯ ಸ್ಪರ್ಧಾತ್ಮಕ ಪರೀಕ್ಷೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ದಿನಾಂಕ 09-03-2022 ರಂದು ಅಧಿಸೂಚಿಸಿದ್ದ ಆಯುಷ್ ಇಲಾಖೆಯಲ್ಲಿನ ಔಷಧ ವಿಶ್ಲೇಷಕರು (ಬಾಟನಿ) ಮತ್ತು (ರಾಸಾಯನ ಶಾಸ್ತ್ರ) ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನವೆಂಬರ್ 29, 30, 2022 ರಂದು ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ. ಈ ಪರೀಕ್ಷೆಗಳನ್ನು ಬೆಂಗಳೂರು ಕೇಂದ್ರದಲ್ಲಿ ನಡೆಸಲಾಗುತ್ತದೆ.
ದಿನಾಂಕ 17-03-2022 ರಂದು ಅಧಿಸೂಚಿಸಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಕಿರಿಯ ಅಭಿಯಂತರರು 89+47 (HK) ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯನ್ನು ಡಿಸೆಂಬರ್ 24, 25, 2022 ರಂದು ಬೆಂಗಳೂರು ಪರೀಕ್ಷಾ ಕೇಂದ್ರದಲ್ಲಿ ನಡೆಸಲಾಗುತ್ತದೆ.
ದಿನಾಂಕ 19-03-2022 ರಂದು ಹೊರಡಿಸಿದ್ದ ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ (ನಗರಸಭೆ / ಪುರಸಭೆ / ಪಟ್ಟಣ ಪಂಚಾಯಿತಿ) ವಿವಿಧ ಗ್ರೂಪ್ ಸಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗೆ 2023ರ ಜನವರಿ 21, 22 ರಂದು ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ