ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಬ್ರಿಟನ್ ಪ್ರಧಾನಿ ಸ್ಥಾನಕ್ಕೆ ಲಿಜ್ ಟ್ರಸ್ ರಾಜೀನಾಮೆ | ಭಾರತ ಮೂಲದ ರಿಷಿ ಸುನಾಕ್‍ಗೆ ಪಟ್ಟ ಸಾಧ್ಯತೆ !

ಮೊನ್ನೆ ತಾನೆ ಉದ್ಭವ ಆದ ಬ್ರಿಟನ್‍ನಲ್ಲಿ ರಾಜಕೀಯ ಬಿಕ್ಕಟ್ಟು ಎದುರಾಗಿದ್ದು, ಪ್ರಧಾನಿ ಲಿಜ್ ಟ್ರಸ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಕೆಲವೇ ಇನಗಳಲ್ಲಿ ಅವರು ರಾಜೀನಾಮೆ ಘೋಷಿಸಿದ್ದಾರೆ.

ಪ್ರಧಾನಿ ಲಿಜ್ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಅವರ ಸರ್ಕಾರದಿಂದ ಒಬ್ಬೊಬ್ಬರೇ ಅಧಿಕಾರದಿಂದ ಹೊರ ನಡೆದರು. ಈಚೆಗಷ್ಟೇ ಹಣಕಾಸು ಸಚಿವ ಸ್ಥಾನಕ್ಕೆ ಕ್ವಾಸಿ ಕ್ವಾಟೆರ್ಂಗ್ ರಾಜೀನಾಮೆ ನೀಡಿದ್ದರು. ಬುಧವಾರ ಕೂಡ ಗೃಹ ಸಚಿವೆ, ಭಾರತೀಯ ಮೂಲದ ಸುಯೆಲ್ಲಾ ಬ್ರೇವರ್‍ಮನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಆರ್ಥಿಕ ಮತ್ತು ಅಂತಾರಾಷ್ಟ್ರೀಯ ಅಸ್ಥಿರತೆಯ ಸಮಯದಲ್ಲಿ ತಾನು ಅಧಿಕಾರಕ್ಕೆ ಬಂದಿದ್ದೆ. ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದು, ಉತ್ತರಾಧಿಕಾರಿ ಆಯ್ಕೆಯಾಗುವವರೆಗೂ ನಾನು ಪ್ರಧಾನಿಯಾಗಿಯೇ ಮುಂದುವರಿಯುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಬಲಪಂಥೀಯ ಆರ್ಥಿಕತೆಯ ಕಾರ್ಯಸೂಚಿಯಿಂದ ಪ್ರಧಾನಿ ಟ್ರಸ್ ಹಿಂದೆ ಸರಿಯುತ್ತಿದ್ದಂತೆಯೇ ಅವರು ಕೂಡ ಅಧಿಕಾರದಲ್ಲಿ ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಹೇಳಲಾಗಿತ್ತು. ಈಗ ಹಾಗೆಯೆ ಆಗಿದೆ. ಊಹಿಸಿದಂತೆ ಪ್ರಧಾನಿ ಟ್ರಸ್ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬ್ರಿಟನ್ ಪ್ರಧಾನಿ ಸ್ಥಾನಕ್ಕೆ ಬೋರಿಸ್ ಜಾನ್ಸನ್ ರಾಜೀನಾಮೆ ನೀಡಿದ ಬಳಿಕ ನಡೆದ ಚುನಾವಣೆಯಲ್ಲಿ ಲಿಜ್ ಟ್ರಸ್ ಮತ್ತು ಭಾರತ ಮೂಲದ ರಿಷಿ ಸುನಾಕ್ ನಡುವೆ ಪಟ್ಟಕ್ಕಾಗಿ ತೀವ್ರ ಸ್ಪರ್ಧೆ ನಡೆದಿತ್ತು. ಕೊನೆಗೆ ಸುನಕ್ ಮಣಿಸಿ ಟ್ರಸ್ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿ ಪ್ರಧಾನಿ ಪಟ್ಟ ಏರಿದ್ದರು.

Leave A Reply

Your email address will not be published.