ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ಪೋಷಕರಿಗೆ ಮತ್ತೊಂದು ಹೊರೆಯನ್ನು ಹೇರಲು ಮುಂದಾದ ರಾಜ್ಯ ಸರ್ಕಾರ!
ಸರ್ಕಾರಿ ಶಾಲೆಯೂ ಬಡವರ ಮಕ್ಕಳಿಗಾಗಿಯೇ ರೂಪಿತವಾದ ಶಾಲೆ ಎಂದರು ತಪ್ಪಾಗಲಾರದು. ಯಾವುದೇ ವೆಚ್ಚ ಇಲ್ಲದೆ ಕಡಿಮೆ ಹಣ ಪಾವತಿ ಮೂಲಕ ಹಲವು ಸೌಲಭ್ಯ ತಮ್ಮ ಮಕ್ಕಳಿಗೆ ಲಭ್ಯವಾಗಲಿ ಎಂಬ ಉದ್ದೇಶದಿಂದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸುತ್ತಾರೆ. ಆದರೆ, ಇದೀಗ ಸರ್ಕಾರಿ ಶಾಲೆಗೆ ಕಳುಹಿಸಲು ಚಿಂತಿಸಬೇಕಾದ ಪರಿಸ್ಥಿತಿ ಎದುರಾಗಿದೆ.
ಹೌದು. ಈ ದುಬಾರಿ ದುನಿಯಾದಲ್ಲಿ ಜೀವನ ನಡೆಸುದೆ ಕಷ್ಟ ಎನ್ನುವ ಮಟ್ಟಿಗೆ ಆಗಿದೆ. ಅಂತದರಲ್ಲಿ ಸರ್ಕಾರಿ ಶಾಲೆಯು ಕೂಡ ಪೋಷಕರಿಗೆ ದೊಡ್ಡ ಹೊರೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳು ಪ್ರಾಥಮಿಕ, ಪ್ರೌಢಶಾಲೆಗಳ ಅಗತ್ಯ ಖರ್ಚು ವೆಚ್ಚಗಳಿಗಾಗಿ ಮಕ್ಕಳ ಪೋಷಕರಿಂದ ಪ್ರತಿ ತಿಂಗಳು ನೂರು ರೂಪಾಯಿ ದೇಣಿಗೆ ಸಂಗ್ರಹಿಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಆದರೆ ಇದಕ್ಕೆ ಶಿಕ್ಷಣ ತಜ್ಞರಿಂದ ವಿರೋಧ ವ್ಯಕ್ತವಾಗಿದ್ದು, ಸರ್ಕಾರಿ ಶಾಲೆಗಳಲ್ಲಿ ಕೂಲಿ ಕಾರ್ಮಿಕರು, ಬಡವರ ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಇಂತಹ ವಿದ್ಯಾರ್ಥಿಗಳ ಪೋಷಕರು ದಿನನಿತ್ಯದ ಜೀವನ ನಡೆಸಲು ಕಷ್ಟ ಪಡುತ್ತಿದ್ದಾರೆ. ಅವರಿಂದ ಪ್ರತಿ ತಿಂಗಳು ನೂರು ರೂಪಾಯಿಗಳನ್ನು ದೇಣಿಗೆ ರೂಪದಲ್ಲಿ ಪಡೆಯುವುದು ಎಷ್ಟು ಸರಿ ಎಂದು ಪ್ರಶ್ನಿಸಲಾಗುತ್ತಿದೆ. ಒಟ್ಟಾರೆ ಸರ್ಕಾರಿ ಶಾಲೆಗೂ ಮಕ್ಕಳನ್ನು ಕಳುಹಿಸಲಾಗದೆ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುವ ಕಾಲ ಸಮೀಪಿಸುತ್ತಿದೆ ಎಂದೆ ಹೇಳಬಹುದು.