ರೈತರೇ ಗಮನಿಸಿ : ‘ಗಂಗಾ ಕಲ್ಯಾಣ’ ಯೋಜನೆಯ ಅವಧಿ ವಿಸ್ತರಣೆ!!!

ಈಗಾಗಲೇ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವ್ಯಾಪ್ತಿಯಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆ ಅರ್ಜಿ ಆಹ್ವಾನಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಸುವಿಕೆ ನಿಯಮದಲ್ಲಿ ಬದಲಾವಣೆ ಮಾಡಲಾಗಿದೆ.

 

ಅಂದರೆ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವ್ಯಾಪ್ತಿಯಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆ ಅಡಿ ಸೌಲಭ್ಯ ಒದಗಿಸಲಾಗುತ್ತಿದ್ದ ಯೋಜನೆಗೆ
ಆನ್ಲೈನ್ ಮೂಲಕ ಸಹ ಇದರ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಇದೀಗ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 5ರ ವರೆಗೆ ವಿಸ್ತರಿಸಲಾಗಿದೆ ಮಾಹಿತಿ ಇದೆ.

ಅಲ್ಲದೆ ಅರಿವು ಶೈಕ್ಷಣಿಕ ಸಾಲ ಯೋಜನೆ ಹಾಗೂ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣಕ್ಕಾಗಿ ಸಾಲ ಯೋಜನೆ ಅಡಿ ಸೌಲಭ್ಯ ಪಡೆಯಲು ಅರ್ಜಿ ಕರೆಯಲಾಗಿತ್ತು ಪ್ರಸ್ತುತ ಅರಿವು ಶೈಕ್ಷಣಿಕ ಸಾಲ ಯೋಜನೆ ಹಾಗೂ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣಕ್ಕಾಗಿ ಸಾಲ ಯೋಜನೆ ಅಡಿ ಸೌಲಭ್ಯ ಪಡೆಯಲು ಸಲ್ಲಿಸುವ ಅವಧಿಯನ್ನೂ ಸಹ ಡಿಸೆಂಬರ್ 31ರವರೆಗೆ ವಿಸ್ತರಿಸಲಾಗಿದೆ.

Leave A Reply

Your email address will not be published.