ONGC Recruitment 2022: 56 ಹುದ್ದೆಗಳಿಗೆ ಅರ್ಜಿ ಆಹ್ವಾನ

ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC)ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ :  56 ಹಣಕಾಸು ಅಧಿಕಾರಿ ಮತ್ತು ಮರೈನ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ದಿನಾಂಕ : ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 18,2022 ರಿಂದ ನವೆಂಬರ್ 7,2022ರೊಳಗೆ ಅರ್ಜಿಯನ್ನು ಹಾಕಬಹುದು.

ವಿದ್ಯಾರ್ಹತೆ : ಈ ಹುದ್ದೆಗಳಿಗೆ ಸಿಎ, ಐಸಿಡಬ್ಲ್ಯೂಎ, ಪದವಿ, ಎಂಬಿಎ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆಯನ್ನು ನೀಡಲಾಗುವುದು.

ವಯೋಮಿತಿ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನವೆಂಬರ್ 7,2022ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 60,000/- ರಿಂದ 1,80,000/- ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.

ಅರ್ಜಿ ಸಲ್ಲಿಕೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://ongcindia.com/ ವೆಬ್ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಅಕ್ಟೋಬರ್ 18,2022 ರಿಂದ ನವೆಂಬರ್ 7,2022ರೊಳಗೆ ಅರ್ಜಿಯನ್ನು ಹಾಕಬಹುದು.

Leave A Reply

Your email address will not be published.