Bangalore University Student : ಬಸ್ ಹತ್ತುವಾಗ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ | ಜೀವನ್ಮರಣ ಹೋರಾಟ ಇಂದು ಅಂತ್ಯ- ವಿದ್ಯಾರ್ಥಿನಿ ಸಾವು

Share the Article

ಬಸ್ ಹತ್ತುವಾಗ ಆಯತಪ್ಪಿ ಬಿದ್ದಿದ್ದ ವಿದ್ಯಾರ್ಥಿನಿ ಮೇಲೆ ಬಿಎಂಟಿಸಿ ಬಸ್ (BMTC Bus) ಹರಿದು, ಕಳೆದ 14 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಂಗಳೂರು ವಿವಿ ವಿದ್ಯಾರ್ಥಿನಿ (Bangalore university Student) ಶಿಲ್ಪಾ ಇಂದು ಮೃತರಾಗಿದ್ದಾರೆ.

ಅಕ್ಟೋಬರ್ 11ರಂದು ಅಪಘಾತ (Accident) ನಡೆದಿತ್ತು. ಈ ಘಟನೆ ಬಳಿಕ ರಸ್ತೆಗೆ ಇಳಿದಿದ್ದ ವಿವಿ ವಿದ್ಯಾರ್ಥಿನಿಯರು (Bangalore university Student Protest) ಖಾಸಗಿ ಬಸ್ (Private Bus) ಓಡಾಟಕ್ಕೆ ಬ್ರೇಕ್ ಹಾಕಬೇಕೆಂದು ದೊಡ್ಡ ಪ್ರತಿಭಟನೆ ಮಾಡಿದ್ದರು. ಈಗಲೂ ವಿವಿ ವಿದ್ಯಾರ್ಥಿಗಳ ಪ್ರತಿಭಟನೆ ಮಾಡ್ತಾ ಇದ್ದಾರೆ. ಶಿಲ್ಪಾ ಆರೋಗ್ಯ ಚೇತರಿಕೆಗಾಗಿ ಸಾವಿರಾರು ವಿದ್ಯಾರ್ಥಿಗಳು ಪ್ರಾರ್ಥನೆ ಸಲ್ಲಿಸಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಶಿಲ್ಪಾ ಮೃತರಾಗಿದ್ದಾರೆ.

ಕೋಲಾರ ಜಿಲ್ಲೆಯ ಕೆಜಿಎಫ್ ಮೂಲದ ಶಿಲ್ಪಾ ಶ್ರೀಧರ್ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಪ್ರಥಮ ಎಂಎಸ್ಸಿ ಗಣಿತ ಶಾಸ್ತ್ರದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಕಳೆದ 14 ದಿನಗಳಿಂದ ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದ ಶಿಲ್ಪ ಸೊಂಟದ ಕೆಳಭಾಗಕ್ಕೆ ತೀವ್ರ ಪೆಟ್ಟಾಗಿತ್ತು. ಬನ್ನೇರುಘಟ್ಟ ರಸ್ತೆಯ ಪೋರ್ಟಿಸ್ ಆಸ್ಪತ್ರೆಗೆ ಶಿಲ್ಪಾಳನ್ನು ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.

Leave A Reply

Your email address will not be published.