ಸುಳ್ಯ ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶಾಂತಿ ಪ್ರಭು ಪತಿ ಗುಂಡು ಹಾರಿಸಿ ಆತ್ಮಹತ್ಯೆ ಯತ್ನ : ಸ್ಥಿತಿ ಗಂಭೀರ !

Share the Article

ಸುಳ್ಯ ; ನಗರ ಪಂಚಾಯತ್ ಮಾಜಿ‌ ಉಪಾಧ್ಯಕ್ಷೆಯೋರ್ವ ಪತಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆಯೊಂದು ಇಂದು ನಡೆದಿದೆ.

ಸುಳ್ಯ ನಗರ ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾದ ಶಾಂತಿ ಪ್ರಭುರವರ ಪತಿಯೇ ಈ ಕೃತ್ಯ ಎಸಗಿದವರು. ಸುಳ್ಯದ ಜಟ್ಟಿಪಳ್ಳ ನಿವಾಸಿ ಕೇಶವ ಪ್ರಭು ಎಂಬುವವರು ತಲೆಗೆ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

ಈ ಘಟನೆಯು ಇಂದು ಪೂರ್ವಾಹ್ನ 11 ಗಂಟೆಯ ಸುಮಾರಿಗೆ ನಡೆದಿದೆ. ಅವರು ವಾಸವಿದ್ದ
ಮನೆಯಲ್ಲಿಯೇ ಈ ಘಟನೆ ನಡೆದಿದ್ದು, ವಿಷಯ ತಿಳಿದ ಕೂಡಲೇ ಆಸ್ಪತ್ರೆಗೆ ರವಾನಿಸಲಾಯಿತು. ಗುಂಡು ಹಾರಿಸಿಕೊಳ್ಳಲು ಕಾರಣವೇನೆಂದು ಇನ್ನೂ ಗೊತ್ತಾಗಿಲ್ಲ.

ಆಸ್ಪತ್ರೆಯಲ್ಲಿ ದಾಖಲಾಗಿರುವ ಕೇಶವ ಪ್ರಭು ಅವರ ಈಗಿನ ಆರೋಗ್ಯ ಸ್ಥಿತಿ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ದೊರಕಿಲ್ಲ. ಗುಂಡು ಹಾರಿಸಿಕೊಳ್ಳಲು ಕಾರಣವೇನೆಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸಲು ಪ್ರಾರಂಭ ಮಾಡಿದ್ದಾರೆ.

Leave A Reply