ಹಿಂದೂ ಕಾರ್ಯಕರ್ತ ಹರ್ಷನ ಮನೆ ಬಳಿ ತಡರಾತ್ರಿ ಮಾರಕಾಸ್ತ್ರ ಹಿಡಿದು ಬೆದರಿಕೆ ಹಾಕಿದ ದುಷ್ಕರ್ಮಿಗಳು! ಶಿವಮೊಗ್ಗ ಮತ್ತೊಮ್ಮೆ ಪ್ರಕ್ಷುಬ್ಧ

Share the Article

ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷನ ಮನೆಯವರಿಗೆ ಸೋಮವಾರ ತಡರಾತ್ರಿ ಮಾರಕಾಸ್ತ್ರಗಳನ್ನು ಹಿಡಿದು ಬೈಕ್‌ನಲ್ಲಿ ಕೂಗುತ್ತಾ ಓಡಾಡಿದ ಅನ್ಯಕೋಮಿನ ಯುವಕರ ಗುಂಪು ಬೆದರಿಕೆ ಹಾಕಿದ ಘಟನೆ ನಡೆದಿದೆ. ಅಲ್ಲದೆ, ಓರ್ವ ಯುವಕನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದು, ಶಿವಮೊಗ್ಗದಲ್ಲಿ ಪ್ರಕ್ಷ್ಯುಬ್ಧ ವಾತಾವರಣ ನಿರ್ಮಾಣಗೊಂಡಿದೆ.

ನಿನ್ನೆ(ಸೋಮವಾರ) ತಡರಾತ್ರಿ ಮಾರಕಾಸ್ತ್ರಗಳನ್ನು ಹಿಡಿದು ಬೈಕ್‌ನಲ್ಲಿ ಕೂಗುತ್ತಾ ಓಡಾಡಿದ ಅನ್ಯಕೋಮಿನ ಯುವಕರ ಗುಂಪು, ಹರ್ಷನ ಮನೆ ಬಳಿ ಬೈಕ್ ನಿಲ್ಲಿಸಿ ಹರ್ಷ‌ನ ಸಹೋದರಿ ಹಾಗೂ ಕುಟುಂಬ್ಥರಿಗೆ ಬೆದರಿಕೆ ಹಾಕಿದೆ. ಬಳಿಕ ಬೈಕ್​ನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ. ವಿಷಯ ತಿಳಿದು ಸ್ಥಳೀಯ ಯುವಕರು ದುಷ್ಕರ್ಮಿಗಳನ್ನು ಹಿಂಬಾಲಿಸಿದ್ದರಾದರೂ ಅಷ್ಟರಲ್ಲಾಗಲೇ ಪರಾರಿಯಾಗಿದ್ದರು. ಪರಾರಿಯಾಗುವ ವೇಳೆ ಭರಮಪ್ಪ ನಗರದಲ್ಲಿ ಪ್ರಕಾಶ್ ಎಂಬ ಯುವಕನಿಗೆ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ. ಪ್ರಕಾಶ್​ಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಎಸ್​ಪಿ ಮಿಥುನ್ ಕುಮಾರ್, ಮುಂಜಾಗ್ರತಾ ಕ್ರಮವಾಗಿ ಸೀಗೆಹಟ್ಟಿ ಭಾಗದಲ್ಲಿ ಪೊಲೀಸ್​ ಬಂದೋಬಸ್ತ್​ ಮಾಡಿದ್ದಾರೆ.

Leave A Reply