KARTET 2022 : ಟಿಇಟಿ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ | ಡೌನ್ಲೋಡ್ ಮಾಡೋ ವಿಧಾನ ಇಲ್ಲಿದೆ!

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅಧಿಸೂಚನೆಯಂತೆ ಅಭ್ಯರ್ಥಿಗಳ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ.

 

ಈಗಾಗಲೇ ನಿಗದಿತ ಶುಲ್ಕ ಪಾವತಿಸಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಪ್ರವೇಶ ಪತ್ರ ಪಡೆದುಕೊಳ್ಳಬಹುದಾಗಿದೆ.

ದಿನಾಂಕ 06-11-2022ರ ಭಾನುವಾರದಂದು (KARTET-2022)ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ರಾಜ್ಯದಾದ್ಯಂತ ಎರಡು ಅಧಿವೇಶನಗಳಲ್ಲಿ ನಡೆಯಲಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ http://schooleducation.kar.nic.in ಗೆ ಭೇಟಿ ನೀಡಿ, ಅಭ್ಯರ್ಥಿಗಳು ತಮ್ಮ ಯೂಸರ್ ಐಡಿ, ಮತ್ತು ಪಾಸ್‌ವರ್ಡ್ ಅನ್ನು ನಮೂದಿಸುವ ಮೂಲಕ ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ.

ಈ ಬಾರಿಯ ಟಿಇಟಿ-2022 ರ ಪರೀಕ್ಷೆಯನ್ನು ದಿನಾಂಕ 06-11-2022 ರಂದು ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿದ್ದು, ಈ ದಿನದಂದು, ಪತ್ರಿಕೆ-1, ಪತ್ರಿಕೆ -2, ಎರಡು ಪರೀಕ್ಷೆಗಳನ್ನು ನಡೆಸಲಾಗುತ್ತದೆ.

ಪತ್ರಿಕೆ-1 ಪರೀಕ್ಷೆಯು ಬೆಳಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ನಡೆಯಲಿದೆ. ಹಾಗೂ ಪತ್ರಿಕೆ -2 ರ ಪರೀಕ್ಷೆಯು ಮಧ್ಯಾಹ್ನ 2 ರಿಂದ ಸಂಜೆ 4.30ರ ವರೆಗೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ.

ಟಿಇಟಿ-2022 ಪ್ರವೇಶ ಪತ್ರ ಡೌನ್‌ಲೋಡ್‌ ಮಾಡುವ ವಿಧಾನವು ಹೀಗಿವೆ:

ಅಭ್ಯರ್ಥಿಗಳು ಮೊದಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ http://schooleducation.kar.nic.in ಗೆ ಭೇಟಿ ನೀಡಬೇಕು. ನಂತರ ಮುಖಪುಟದಲ್ಲಿ ಲಭ್ಯವಿರುವ ‘KARTET 2022 ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2022’ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಬಳಿಕ ಹೊಸ ವೆಬ್‌ಪುಟ ತೆರೆದುಕೊಳ್ಳುತ್ತದೆ.

ಆ ಪುಟದಲ್ಲಿ ಅರ್ಜಿದಾರರ ಹೆಸರು, ಪಾಸ್‌ವರ್ಡ್‌, ಜನ್ಮದಿನಾಂಕ ಸೇರಿದಂತೆ ಇನ್ನಿತರ ರುಜುವಾತುಗಳನ್ನು ನಮೂದಿಸಬೇಕು. ನಂತರ ಸ್ಕ್ರೀನ್ ಮೇಲೆ ಟಿಇಟಿ -2022ರ ಪ್ರವೇಶ ಪತ್ರ ಪ್ರದರ್ಶನವಾಗುತ್ತದೆ. ಅದನ್ನು ಡೌನ್‌ಲೋಡ್‌ ಮಾಡಿಕೊಂಡು ಪ್ರಿಂಟ್‌ ತೆಗೆದುಕೊಳ್ಳಬೇಕು.

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಂಡ ಮೇಲೆ ವೆಬ್‌ಸೈಟ್‌ನಲ್ಲಿ ಸೂಚನಾ ಪ್ರತಿಯನ್ನು ಡೌನ್‌ಲೋಡ್‌ ಮಾಡಿಕೊಂಡು, ಕೂಲಂಕಷವಾಗಿ ಓದಿ ಅರ್ಥೈಸಿಕೊಂಡು ಅದರಂತೆ ಸಿದ್ಧತೆಯೊಂದಿಗೆ ಪರೀಕ್ಷೆಗೆ ಹಾಜರಾಗಲು ಸೂಚನೆ ನೀಡಲಾಗಿದೆ.

Leave A Reply

Your email address will not be published.