Journalist apprentice training 2022 : ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ | ಅಭ್ಯರ್ಥಿಗಳೇ ನಿಮಗೆ ದೊರಕಲಿದೆ ರೂ.15,000/- ಸ್ಟೈಪಂಡ್!!!

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಕೊಪ್ಪಳ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ  ಜಿಲ್ಲಾ ಕಚೇರಿಗಳಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಮತ್ತು ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

 

ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ನೀಡುವ 12 ತಿಂಗಳ ಅಪ್ರೆಂಟಿಸ್ ತರಬೇತಿ ನೀಡಲಾಗುವುದು.
ತರಬೇತಿ ಪಡೆಯಲು ಅಭ್ಯರ್ಥಿಯು ಕಡ್ಡಾಯವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪಡೆದಿರಬೇಕು.


ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯ. ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು. ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.


ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು.

ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್‌ ತರಬೇತಿಗಾಗಿ ಅರ್ಜಿ’ ಎಂದು ನಮೂದಿಸುವುದು.


ಆಯ್ಕೆಯಾದ ಅಭ್ಯರ್ಥಿಗಳು ಸಂದರ್ಶನದ ವೇಳೆ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಆಯ್ಕೆಯಾಗಿ ತರಬೇತಿಗೆ ಹಾಜರಾಗುವ ಸಂದರ್ಭದಲ್ಲಿ ಮೂಲ ದಾಖಲಾತಿಗಳನ್ನು ಆಯಾ ಜಿಲ್ಲಾ ವಾರ್ತಾಧಿಕಾರಿಗಳಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಅಭ್ಯರ್ಥಿಗಳು ಸ್ನಾತ್ತಕೋತ್ತರ ಅಂತಿಮ ವರ್ಷದ ಪದವಿಯ ಅಂಕಪಟ್ಟಿಯೊಂದಿಗೆ ಅರ್ಜಿಸಲ್ಲಿಸಬೇಕು.

ಅಭ್ಯರ್ಥಿಗಳಿಗೆ ತರಬೇತಿಯ ಅವಧಿ ವೇಳೆ 15,000/- ರೂ. ಸ್ಟೈಪಂಡ್ ನೀಡಲಾಗುವುದು. ಹಾಗೂ ತರಬೇತಿಯ ಅವಧಿಯು ಬೆಳ್ಳಗೆ 10 ರಿಂದ ಸಂಜೆ 05.30 ಗಂಟೆಯ ವರೆಗೆ ಇರುತ್ತದೆ. ಈ ತರಬೇತಿಯು ತಾತ್ಕಾಲಿಕವಾಗಿದ್ದು, 12 ತಿಂಗಳ ಅಪ್ರೆಂಟಿಸ್ ತರಬೇತಿಯಾಗಿರುತ್ತದೆ. ತರಬೇತಿ ಮುಗಿದ ನಂತರ ಮುಂದುವರೆಸಲು ಅಥವಾ ಖಾಯಂಗೊಳಿಸುವ ಯಾವ ಒತ್ತಡ ಹಾಕುವಂತಿಲ್ಲ.

ಅರ್ಜಿ ಸಲ್ಲಿಸಲು ನವೆಂಬರ್ 10 ಕೊನೆಯ ದಿನವಾಗಿದ್ದು, ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ ಭವನ ಕೊಪ್ಪಳ ಕ್ಕೆ ಭೇಟಿ ನೀಡಲು ಸೂಚನೆ ನೀಡಲಾಗಿದೆ.

ಮಾಹಿತಿಗಾಗಿ ದೂರವಾಣಿ ಸಂಖ್ಯೆ 08539-220607, ಮೊ.ಸಂ. 9480841245, 9380753224 ಗೆ ಸಂಪರ್ಕಿಸಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಗವಿಸಿದ್ದಪ್ಪ ಬಿ. ಹೊಸಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.