ಜಮೀನು ನಕ್ಷೆ ಇನ್ಮುಂದೆ ಆನ್ಲೈನ್ ನಲ್ಲಿ ಲಭ್ಯ| ನಕ್ಷೆ ಪಡೆಯೋದು ಹೇಗೆ?

ಜಮೀನಿಗೆ ಸಂಬಂಧಿಸಿರುವ 11ಇ, ಪೋಡಿ, ಭೂ ಪರಿವರ್ತನೆ ಸ್ಕೆಚ್ ಹಾಗೂ ಹಲವು ನಕ್ಷೆಗಳನ್ನು ಪಡೆಯಲು ಇನ್ನುಮುಂದೆ ಅಲೆದಾಡಬೇಕಿಲ್ಲ. ಹೌದು ಇನ್ನು ಮುಂದೆ 11ಇ, ಪೋಡಿ, ಭೂ ಪರಿವರ್ತನೆ ಸ್ಕೆಚ್ ಹಾಗೂ ಹಲವು ನಕ್ಷೆಗಳನ್ನು ಆನ್ಲೈನ್ ನಲ್ಲೇ ಪಡೆಯಬಹುದು . ಈ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ವ್ಯವಸ್ಥೆ ಮಾಡಿರುವ ಮಾಹಿತಿ ನೀಡಿರುತ್ತಾರೆ.


Ad Widget

Ad Widget

Ad Widget

Ad Widget
Ad Widget

Ad Widget

ಅದಲ್ಲದೆ ರೈತರು ತಮ್ಮ ಜಮೀನಿನ ಪೋಡಿ ನಕ್ಷೆಯನ್ನು ತಾವೇ ತಯಾರಿಸಿಕೊಳ್ಳುವ ಸ್ವಯಂ ಸೇವೆಯ ಹೊಸ ವ್ಯವಸ್ಥೆಯನ್ನು ಕಂದಾಯ ಇಲಾಖೆ ಸಿದ್ಧಪಡಿಸಿದೆ. ಇದಕ್ಕಾಗಿ ಕಂದಾಯ ಇಲಾಖೆಯು ಸ್ವಾವಲಂಬಿ ಎಂಬ ಹೆಸರಿನ ಆ್ಯಪ್ ಒಂದನ್ನು ಅಭಿವೃದ್ಧಿಪಡಿಸಿದೆ. ಈ ಆ್ಯಪ್ ಸಹಾಯದಿಂದ ರೈತರು ಜಮೀನಿನ ಪೋಡಿಯನ್ನು ಸ್ವತಃ ತಯಾರಿಸಿ ಕೊಳ್ಳಬಹುದು.


Ad Widget

ಈಗಾಗಲೇ 11ಇ, ಪೋಡಿ, ಭೂ ಪರಿವರ್ತನೆ ಸ್ಕೆಚ್, ಹದ್ದುಬಸ್ತು ಮತ್ತು ಇತರೆ ನಕ್ಷೆಗಳಿಗೆ ಅರ್ಜಿ ಸಲ್ಲಿಸಿರುವ ನಾಗರಿಕರು https://103,138,196.154/service19/Report/ ವೆಬ್‌ಸೈಟ್ ಮೂಲಕ ತಾವು ಸಲ್ಲಿಸಿರುವ ಅರ್ಜಿಯ ವಿವರಗಳನ್ನು ತಿಳಿದುಕೊಳ್ಳಬಹುದು.

11ಇ, ಪೋಡಿ, ಭೂ ಪರಿವರ್ತನೆ ಸ್ಕೆಚ್, ಹದ್ದುಬಸ್ತು ಮತ್ತು ಇತರೆ ನಕ್ಷೆಗಳಿಗೆ ಅರ್ಜಿ ಸ್ವೀಕಾರಗೊಂಡ ನಂತರ ಸರ್ವೇ ಸಿಬ್ಬಂದಿ ತಮ್ಮ ಜಮೀನಿಗೆ ಬಂದು ಸಂಬಂಧಪಟ್ಟ ಮಾಪನ ಕಾರ್ಯ ಮುಗಿದು ನಕ್ಷೆ ಅನುಮೋದಿಸಿದ ತಕ್ಷಣವೇ ಈ ವೆಬ್‌ಸೈಟ್‌ನಲ್ಲಿ ನಕ್ಷೆಗಳ ಮುದ್ರಣ ಪ್ರತಿಯನ್ನು ಸಾರ್ವಜನಿಕರು ಪಡೆದುಕೊಳ್ಳಬಹುದು ಎಂದು ತಿಳಿಸಲಾಗಿದೆ.
ಮುಖ್ಯವಾಗಿ ಅರ್ಜಿ ಸಲ್ಲಿಸುವಾಗ ನಾಗರಿಕರು ಹಣ ಪಾವತಿಸಿರುವ ಕಾರಣ ನಕ್ಷೆ ಪ್ರತಿಗಳನ್ನು ಡೌನ್‌ಲೋಡ್ ಮಾಡಿಕೊಂಡು ಮುದ್ರಣ ಪ್ರತಿ ಪಡೆಯಲು ಯಾವುದೇ ಹೆಚ್ಚುವರಿ ಹಣ ಕೊಡಬೇಕಾಗಿರುವುದಿಲ್ಲ. ಇದರಿಂದ ತಮ್ಮ ನಕ್ಷೆಗಳ ಪ್ರಿಂಟ್ ಔಟ್ ಪಡೆಯಲು ಸರ್ವೆ ಕಚೇರಿಗಳಿಗೆ ಹೋಗಬೇಕಾಗಿಲ್ಲ.

ವೆಬ್ ಸೈಟ್‌ಗೆ ಭೇಟಿ ನೀಡಿದಾಗ ನಾಗರಿಕರು ಯಾವ ನಕ್ಷೆಗೆ ಅರ್ಜಿ ಸಲ್ಲಿಸಿರುತ್ತಾರೋ ಆ ಅರ್ಜಿ ಸಂಖ್ಯೆ, ಮೊಬೈಲ್ ಸಂಖ್ಯೆ, ಸರ್ವೆ ನಂಬರ್, ಜಿಲ್ಲೆ ತಾಲ್ಲೂಕು, ಹೋಬಳಿ, ಗ್ರಾಮ, ಸರ್ವೆ ನಂಬರ್ ಹೀಗೆ ವಿವಿಧ ಮಾಹಿತಿಗಳನ್ನು ದಾಖಲಿಸಿ ತಮ್ಮ ನಕ್ಷೆ ಪಡೆದುಕೊಳ್ಳಬಹುದು ಎಂದು ಸರ್ವೇ ಮಾಪನ ಮತ್ತು ಭೂ ದಾಖಲೆಗಳ ಆಯುಕ್ತ ಮುನೀಶ್ ಮೌಗ್ಲಿಲ್ ಅವರು ಮಾಹಿತಿ ತಿಳಿಸಿದ್ದಾರೆ.

ಪೋಡಿ:
ಪೋಡಿ ಎಂದರೆ ಜಮೀನಿನ ಭಾಗ ಮಾಡುವುದು ಎಂದರ್ಥ. ಅಂದರೆ ಒಂದೇ ಸರ್ವೇ ನಂಬರಿನಲ್ಲಿ ಒಬ್ಬರಿಗಿಂತ ಹೆಚ್ಚು ಜನರ ಹೆಸರಿದ್ದರೆ ಅದನ್ನು ಪ್ರತ್ಯೇಕವಾಗಿ ಎಲ್ಲಾ ಸದಸ್ಯರ ಹೆಸರಿನ ಮೇಲೆ ಸರ್ವೇ ನಂಬರ್ ಮಾಡುವುದನ್ನೇ ಪೋಡಿ ಎಂದು ಕರೆಯುವರು.

ಕುಟುಂಬದ ಸದಸ್ಯರ ಪಾಲುಗಾರಿಕೆ, ಭೂ ಆಸ್ತಿಯ ಕೆಲವು ಭಾಗ ಮಾರಾಟ, ದಾನಪತ್ರ, ನಿವೇಶನಕ್ಕೆ ಬಳಕೆ, ಭೂ ಪರಿವರ್ತನೆ ಹೀಗೆ ಹಲವಾರು ಚಟುವಟಿಕೆಗಳಿಗೆ ಪೋಡಿ ನಕ್ಷೆ ತುಂಬಾ ಅವಶ್ಯಕವಾಗಿದೆ. ಒಂದು ಸರ್ವೇ ನಂಬರಿನಲ್ಲಿ ಹಲವರ ಹೆಸರಿದ್ದರೆ ಮುಂದೆ ಸರ್ಕಾರದಿಂದ ಸೌಲಭ್ಯ ಪಡೆಯುವುದಕ್ಕೆ ತೊಂದರೆಯಾಗುತ್ತದೆ. ಬ್ಯಾಂಕಿನಲ್ಲಿ ಸಾಲ ಸೌಲಭ್ಯವೂ ಸಿಗುವುದಿಲ್ಲ. ಜಮೀನು ಮಾರಾಟ ಸಂದರ್ಭದಲ್ಲಿಯೂ ತೊಡಕಾಗುವ ಸಾಧ್ಯತೆ ಇರುತ್ತದೆ. ಫೋಡಿ ನಕ್ಷೆ ಮಾಡಿಸುವುದಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸುವುದಕ್ಕಾಗಿ ಸರ್ಕಾರವು ಈಗ ಆನ್ ಲೈನ್ ವ್ಯವಸ್ಥೆಯನ್ನು ಮಾಡಿದೆ. ರೈತರು ಸ್ವತಃ ಅವರೆ ಮೊಬೈಲ್ ನಲ್ಲಿ ಜಮೀನಿನ ಪೋಡಿ ನಕ್ಷೆ ತಯಾರಿಸಿಕೊಳ್ಳಬಹುದು. ಸಹೋದರರು, ಸಂಬಂಧಿಕರು ಮನೆಯಲ್ಲಿಯೇ ಕುಳಿತು ತಮ್ಮ ಜಮೀನಿನ ಭಾಗ ಮಾಡಿಕೊಳ್ಳಲು ಇದು ಅವಕಾಶ ಕಲ್ಪಿಸಿದೆ. ಮನೆಯಲ್ಲಿ ನಾಲ್ಕು ಜನ ಸದಸ್ಯರಿದ್ದರೆ ತಮ್ಮ ಐದು ಎಕರೆ ಭೂಮಿಯನ್ನು ಯಾರಿಗೆ ಎಷ್ಟು ಭಾಗ ಎಂಬುದನ್ನು ನಿರ್ಧರಿಸಿ ಸ್ಕೆಚ್ ಸಿದ್ಧಪಡಿಸಬಹುದು. ಎಲ್ಲರೂ ಒಪ್ಪಿದ ನಂತರ ಸ್ಕೆಚ್ ಅನ್ನು ತಹಶಿಲ್ದಾರ್ ಕಚೇರಿಯ ಭೂ ದಾಖಲೆಗಳ ವಿಭಾಗಕ್ಕೆ ಅಪ್ಲೋಡ್ ಮಾಡಿದರೆ ಸಾಕು, ನೋಂದಣಿ ಇಲಾಖೆಯಲ್ಲಿ ಆ ಸ್ಕೆಚ್ ನ ಗಡಿಗಳಿಗೆ ಅನುಗುಣವಾಗಿ ನೋಂದಣಿ ಮಾಡಲಾಗುವುದು, ರೈತರಿಗೆ ಸ್ವಾವಲಂಬಿ ಆಯಪ್ ಕೇವಲ ಪೋಡಿ ನಕ್ಷೆ ಅಷ್ಟೇ ಅಲ್ಲದೆ ಜಮೀನಿನ 11 ಇ, ಭೂ ಪರಿವರ್ತನೆ ಮತ್ತು ವಿಭಾಗ ಮಾಡಿಕೊಳ್ಳಲು ಸಹಾಯವಾಗುತ್ತದೆ.

ಮೊಬೈಲ್ ನಲ್ಲಿ ಪೋಡಿ ನಕ್ಷೆ ಪಡೆಯುವ ವಿಧಾನ :
ರೈತರು ಆನ್‌ಲೈನ್ ಮೂಲಕ ಪೋಡಿ ನಕ್ಷೆ ಪಡೆಯಲು https://bhoomojini.karnataka.gov.in/Service27 003 ಮೇಲೆ ಕ್ಲಿಕ್ ಮಾಡಬೇಕು. ಆಗ ಭೂ ಕಂದಾಯ ಇಲಾಖೆಯ ಸ್ವಾವಲಂಬಿ ಆಯಪ್ ಪೇಜ್ ಓಪನ್ ಆಗುತ್ತದೆ. ರೈತರು ಮೊಬೈಲ್ ನಂಬರ್ ಹಾಕಿ ಕ್ಯಾಪ್ಚ ಕೋಡ್ ನಮೂದಿಸಬೇಕು. ನಂತರ ಮೊಬೈಲ್ ಗೆ ಓಟಿಪಿ ಬರುತ್ತದೆ. ಓಟಿಪಿ ನಮೂದಿಸಿದ ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ.

ಅಲ್ಲಿ ಹೊಸ ಅರ್ಜಿ ಮೇಲೆ ಕ್ಲಿಕ್ ಮಾಡಿ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಬೇಕು, ಆಧಾರ್ ಕಾರ್ಡ್ ಹಾಗೂ ಪಹಣಿಯಲ್ಲಿ ಹೆಸರು ಒಂದೇ ರೀತಿಯಿದ್ದರೆ ಸಮಸ್ಯೆಯಾಗುವುದಿಲ್ಲ. ಆಧಾರ್ ಕಾರ್ಡ್ ನಲ್ಲಿರುವ ಹೆಸರನ್ನು ನಮೂದಿಸಿ ಮುಂದಿನ ಪ್ರಕ್ರಿಯೆ ಪೂರ್ಣಗೊಳಿಸಿದರೆ ಪೋಡಿ ನಕ್ಷೆ ಸಿಗುತ್ತದೆ.

ಈ ಮೇಲಿನ ಕ್ರಮದಿಂದ ಪೋಡಿ ನಕ್ಷೆಯನ್ನು ಸುಲಭ ರೀತಿಯಲ್ಲಿ ಸಿದ್ಧ ಪಡಿಸಿಕೊಳ್ಳಬಹುದಾಗಿದೆ ಎಂದು ಸರ್ವೇ ಮಾಪನ ಮತ್ತು ಭೂ ದಾಖಲೆಗಳ ಆಯುಕ್ತ ಮುನೀಶ್ ಮೌಗ್ಲಿಲ್ ಅವರು ಮಾಹಿತಿ ತಿಳಿಸಿದ್ದಾರೆ.

error: Content is protected !!
Scroll to Top
%d bloggers like this: