SC, ST ವಿದ್ಯಾರ್ಥಿಗಳೇ ಗಮನಿಸಿ| ವಾರ್ತಾ ಇಲಾಖೆಯಿಂದ ಅಪ್ರೆಂಟಿಸ್ ಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನ|

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2022-23ನೇ ಸಾಲಿನ ಜಿಲ್ಲಾ ಕಚೇರಿಯಲ್ಲಿ ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ನಿರ್ವಹಣೆ ಕುರಿತು ತರಬೇತಿ ಪಡೆಯಲಿಚ್ಚಿಸುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ತರಬೇತಿ ಪಡೆಯಲು ಬಯಸುವ ಶಿವಮೊಗ್ಗದ ಅಭ್ಯರ್ಥಿಗಳು ಪತ್ರಿಕೋದ್ಯಮ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪಡೆದವರಾಗಿರಬೇಕು. ಕನ್ನಡ, ಇಂಗ್ಲೀಷ್ ಭಾಷೆಯ ಓದು ಮತ್ತು ಬರಹ ಬಲ್ಲವರಾಗಿದ್ದು, ಕಂಪ್ಯೂಟರ್ ಜ್ಞಾನ ಹೊಂದಿದವರಾಗಿರಬೇಕಾಗಿದೆ.

12 ತಿಂಗಳ ತರಬೇತಿ ನೀಡಲಾಗಲಿದ್ದು, ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 15,000/-ರೂ.ಗಳ ಶಿಷ್ಯವೇತನ ನೀಡಲಾಗುತ್ತದೆ.

ಅಲ್ಲದೇ, ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯವರಾಗಿರಬೇಕು. ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ನೆರೆಯ ಜಿಲ್ಲೆಯ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು.

ಈ ಹಿಂದೆ ಅರ್ಜಿ ಸಲ್ಲಿಸಿ, ಆಯ್ಕೆಯಾಗಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಅವಕಾಶವಿರುವುದಿಲ್ಲ.ಅರ್ಹರು ತಮ್ಮ ಸ್ವವಿವರ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ನವೆಂಬರ್ 14 2022ರ ಒಳಗಾಗಿ ಸಲ್ಲಿಸಬೇಕು.

ಅದಕ್ಕಾಗಿ, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರ್.ಎಂ.ವಿ.ರಸ್ತೆ, ಶಿವಮೊಗ್ಗ-577201 ವಿಳಾಸಕ್ಕೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಮಿಂಚಂಚೆ varthabhavansmg1@gmai.com ಅನ್ನು ಸಂಪರ್ಕಿಸಬಹುದಾಗಿದೆ. ಶಿವಮೊಗ್ಗದ ಆಸಕ್ತ ಅಭ್ಯರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬಹುದು.

Leave A Reply

Your email address will not be published.