ಪ್ರಚೋದನಕಾರಿ ಭಾಷಣಗಾರ ಅಜಂ ಖಾನ್ ಗೆ 3 ವರ್ಷ ಜೈಲುವಾಸ – ಸುಪ್ರೀಂ ಮಹತ್ತರ ತೀರ್ಪು ಪ್ರಕಟ

ಮೂರು ವರ್ಷಗಳ ಹಿಂದೆ, ಅಂದರೆ 2019ರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಜಂ ಖಾನ್ ದ್ವೇಷದ ಭಾಷಣ ಮಾಡಿದ್ದರು.

 

ಈ ಹಿನ್ನೆಲೆ ನ್ಯಾಯಾಲಯವು ತೀರ್ಪನ್ನು ಪ್ರಕಟಿಸಿದೆ.2019 ರ ಲೋಕಸಭಾ ಚುನಾವಣೆಯ ಸಾರ್ವಜನಿಕ ಸಭೆಯಲ್ಲಿ ಅಜಂ ಖಾನ್ ಪ್ರಧಾನಿ ಮೋದಿ ಹಾಗೂ ಯೋಗಿಯ ವಿರುದ್ಧ ಅವಾಚ್ಯ ಪದಗಳಿಂದ ನಿಂದಿಸಿದ್ದಲ್ಲದೆ, ದ್ವೇಷ ಭಾಷಣ ನೀಡಿದ್ದಾರೆಂಬ ಆರೋಪ ಅವರ ಮೇಲಿತ್ತು.

ಈ ಆರೋಪದ ಹಿನ್ನೆಲೆಯಲ್ಲಿ ಇಂದು ರಾಂಪುರ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ. ಅಲ್ಲದೆ ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್‌ಗೆ ಕೋರ್ಟ್ 25 ಸಾವಿರ ರೂ. ದಂಡ ಹಾಗೂ 3 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಯ ಅಡಿಯಲ್ಲಿ ಎರಡು ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಸೆಕ್ಷನ್ 505 ರ ಅಡಿಯಲ್ಲಿ ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆ ಮತ್ತು ಜನತಾ ಪ್ರಾತಿನಿಧ್ಯ ಕಾಯಿದೆ 1951ರ ಸೆಕ್ಷನ್ 125ರ ಅಡಿಯಲ್ಲಿ ಅಜಂ ಖಾನ್ ಅವರನ್ನು ದೋಷಿ ಎಂದು ನ್ಯಾಯಲಯವು ಘೋಷಿಸಿದೆ.

ಅಲ್ಲದೆ ಈ ವರ್ಷದ ಆರಂಭದಲ್ಲಿ ವಂಚನೆ ಪ್ರಕರಣದಲ್ಲಿ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನನ್ನು ಕೂಡ ನೀಡಲಾಗಿತ್ತು ಎಂದು ಮಾಹಿತಿ ಪ್ರಕಾರ ತಿಳಿದು ಬಂದಿದೆ.

ಇದರ ಜೊತೆಗೆ ಅಜಂ ಖಾನ್‌ಗೆ 3 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದ್ದರಿಂದ ಶಾಸಕ ಸ್ಥಾನವನ್ನು ಕೂಡ ಕಳೆದುಕೊಳ್ಳಲಿದ್ದಾರೆ. ಅಲ್ಲದೆ, ಸಮಾಜವಾದಿ ಪಕ್ಷದ ನಾಯಕರಾದ ಅಜಂ ಖಾನ್ ಭ್ರಷ್ಟಾಚಾರ ಮತ್ತು ಕಳ್ಳತನ ಸೇರಿದಂತೆ ಸುಮಾರು 90 ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.

Leave A Reply

Your email address will not be published.