ಕಾಂತಾರ ರಿಮೇಕ್ ಮಾಡಿ ಯುವತಿ ವಿವಾದಕ್ಕೆ ಕಾರಣ!

ಕಾಂತಾರ ಸಿನಿಮಾದ  ಹಾಡುಗಳಿಗೆ, ಕೆಲ್ವೊಂದಷ್ಟು  ಫೇಮಸ್ ಡೈಲಾಗ್ ಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ  ಹಲವಾರು ಜನ ರೀಲ್ಸ್ ಮಾಡಿದ್ದಾರೆ. ಲೀಲಾಳ ರೀತಿ ಸೀರೆ ತೊಟ್ಟು, ಮೂಗುತಿ ಹಾಕಿ ಸಿಂಗಾರ ಸಿರಿಯೆ ಸಾಂಗ್ ಗಂತು ಅದೆಷ್ಟು ಜನ ವಿಡಿಯೋ ಮಾಡಿದ್ದಾರೆ ಎಂಬ ಲೆಕ್ಕವೇ ಇಲ್ಲ ಬಿಡಿ.

ಇದೀಗ ಇಲ್ಲಿ ಯುವತಿಯೋರ್ವಳು ಇನ್ಸ್ಟಾಗ್ರಾಮ್‌ನಲ್ಲಿ  ಮಾಡಿರುವ ರೀಲ್ಸ್‌ ಈಗ ವಿವಾದಕ್ಕೆ ಕಾರಣವಾಗಿದೆ.  ಕಾಂತಾರ ಸಿನಿಮಾದ ಪಂಜುರ್ಲಿ ದೈವದ ದೃಶ್ಯ ರೀಲ್ಸ್ ಮಾಡಿ ಯುವತಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾಳೆ.

ಪಂಜುರ್ಲಿ ದೈವದಂತೆ ಬಣ್ಣ ಹಚ್ಚಿ, ವೇಷ ಧರಿಸಿ ಯುವತಿ ರೀಲ್ಸ್ ಮಾಡಿದ್ದು, ಸಾಮಾಜಿಕ ತಾಣಗಳಲ್ಲಿ ಯುವತಿ ವಿರುದ್ದ ಆಕ್ರೋಶ ಕೇಳಿಬಂದಿದೆ. ಮೇಕಪ್ ಅರ್ಟಿಸ್ಟ್ ಆಗಿರೋ ಶ್ವೇತಾ ರೆಡ್ಡಿಇನ್ಸ್ಟಾಗ್ರಾಮ್ ಖಾತೆಯಲ್ಲಿ ರೀಲ್ಸ್  ಮಾಡಿ ಅಪ್‌ಲೋಡ್‌ ಮಾಡಿದ್ದಾರೆ. ಸಿನಿಮಾದ ವರಹಾ ರೂಪಂ ಹಾಡಿಗೆ ರೀಲ್ಸ್ ಮಾಡಲು ದೈವಾರಾಧನೆ ಅಣಕ ಮಾಡಿರುವ ಯುವತಿ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ. ದೈವಾರಾಧನೆಯು ತುಳುನಾಡಿನ ಧಾರ್ಮಿಕ ನಂಬಿಕೆಯ ಭಾಗವಗಿದೆ. ಹೀಗಾಗಿ ತುಳುನಾಡಿನ ನಂಬಿಕೆಗೆ ಇದರಿಂದ ಧಕ್ಕೆಯಾಗಿದೆ, ರೀಲ್ಸ್‌ನ್ನು ತಕ್ಷಣ ಡಿಲೀಟ್‌ ಮಾಡಿ ಕ್ಷಮೆ ಕೇಳುವಂತೆ ಹಲವರು ಕಾಮೆಂಟ್‌ ಮಾಡಿದ್ದಾರೆ. ಆಕ್ರೋಶದ ಬಳಿಕ ಇನ್‌ಸ್ಟಾಗ್ರಾಮ್‌ ಖಾತೆಯಿಂದ ಯುವತಿ ರೀಲ್ಸ್‌ ಡಿಲೀಟ್‌ ಮಾಡಿದ್ದಾಳೆ.

Leave A Reply

Your email address will not be published.