Breaking News | ಬಂಡೆಮಠ ಶ್ರೀ ಆತ್ಮಹತ್ಯೆ ಕೇಸ್ – ಕಣ್ಣೂರು ಶ್ರೀ ಮತ್ತು ಯುವತಿ ಅರೆಸ್ಟ್ !

ಬಂಡೆ ಮಠದ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದೆ. ಇದೀಗ ಕಣ್ಣೂರು ಮಠದ ಮೃತ್ಯಂಜಯ ಶ್ರೀ, ಸ್ಥಳೀಯ ಮುಖಂಡ ಮಹಾದೇವಯ್ಯ ಮತ್ತು ಓರ್ವ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ.

 

ಮಾಗಡಿ ತಾಲೂಕಿನ ಬಸವಲಿಂಗ ಶ್ರೀ ಆತ್ಮಹತ್ಯೆಗೂ ಮುನ್ನ ಡೆತ್‍ನೋಟ್‍ನಲ್ಲಿ ಮೂರು ಪುಟಗಳಲ್ಲಿ ಸವಿಸ್ತಾರವಾಗಿ ಮಾಹಿತಿ ನೀಡಿದ್ದರು. ಈ ವೇಳೆ ಯುವತಿಯನ್ನು ಬಿಟ್ಟು ಕಣ್ಣೂರು ಶ್ರೀಗಳು ಹನಿಟ್ರ್ಯಾಪ್ ಮಾಡಿಸಿರುವ ಕುರಿತು ಹಾಗೂ ಕಣ್ಣೂರು ಶ್ರೀಗಳ ಷಡ್ಯಂತ್ರ್ಯದ ಬಗ್ಗೆಯೂ ಡೆತ್‍ನೋಟ್‍ನಲ್ಲಿ ಉಲ್ಲೇಖಿಸಿದ್ದರು.

ಅಷ್ಟೇ ಅಲ್ಲದೇ ಕಣ್ಣೂರು ಸ್ವಾಮೀಜಿ ಹಾಗೂ ಇತರ ಏಳೆಂಟು ಮಂದಿಯಿಂದ ಕಿರುಕುಳ ನೀಡುತ್ತಿದ್ದಾರೆ. ಅವರು ಮಠದ ವಿಚಾರದಲ್ಲಿ ಆಗಾಗ ತೊಂದರೆ ಉಂಟುಮಾಡುತ್ತಿದ್ದಾರೆ. ನನ್ನ ಸಾವಿಗೆ ಗೊತ್ತಿಲ್ಲದಿರುವ ಆ ಯುವತಿಯೇ ಕಾರಣ ಎಂದು ಸಾವಿಗೂ ಮೊದಲು ಬಂಡೆ ಮಠದ ಶ್ರೀಗಳು ಡೆತ್ ನೋಟ್ ಬರೆದಿಟ್ಟಿದ್ದರು.

ಈಗ ರಾಮನಗರ ಪೊಲೀಸರು ವಿಚಾರಣೆಯನ್ನು ಚುರುಕುಗೊಳಿಸಿ, ಬೆಂಗಳೂರು ಮೂಲದ ಮಹಿಳೆಯನ್ನು ವಿಚಾರಣೆ ನಡೆಸಿದ್ದಾರೆ. ಈ ಬಳಿಕ ಕಣ್ಣೂರು ಶ್ರೀಗಳನ್ನು ಬಂಧಿಸಿದ್ದಾರೆ. ಇದಲ್ಲದೆ ಸ್ವಾಮೀಜಿ ಜೊತೆ ಹಲವಾರು ಮಂದಿ ಈ ಷಡ್ಯಂತ್ರದಲ್ಲಿ ಕೈಜೋಡಿಸಿರುವ ಬಗ್ಗೆ ಶಂಕೆ ಮೂಡಿದೆ.

ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಮನಗರ ಪೊಲೀಸರು ಚುರುಕಿನ ಕಾರ್ಯಾಚರಣೆ ನಡೆಸುತ್ತಿದ್ದು,ಮೂರು ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Leave A Reply

Your email address will not be published.