DRDO CEPTAM RECRUITMENT | ಅರ್ಜಿ ಸಲ್ಲಿಸಲು ಕೊನೆ ದಿನ-ಡಿ.7, ವೇತನ- 1,12,400/- ರೂ.ಗಳವರೆಗೆ

ಡಿಆರ್‌ಡಿಒ ಸಿಇಪಿಟಿಎಎಂ ನ ಲ್ಲಿವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

 

ಹುದ್ದೆ ವಿವರ:
1061 ಶೀಘ್ರಲಿಪಿಗಾರ, ಜ್ಯೂನಿಯರ್ ಟ್ರಾನ್ಸ್‌ಲೇಟರ್ ಅಧಿಕಾರಿ, ಸಹಾಯಕ, ಫೈರ್‌ಮೆನ್ ಮತ್ತು  ವಿವಿಧ ಹುದ್ದೆ

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 7,2022 ರಿಂದ ಡಿಸೆಂಬರ್ 7,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ :
ಡಿಆರ್‌ಡಿಒ ಸಿಇಪಿಟಿಎಎಂ ನೇಮಕಾತಿಯ ಶೀಘ್ರಲಿಪಿಗಾರ, ಜ್ಯೂನಿಯರ್ ಟ್ರಾನ್ಸ್‌ಲೇಟರ್ ಅಧಿಕಾರಿ, ಸಹಾಯಕ, ಫೈರ್‌ಮೆನ್ ಮತ್ತು ವಿವಿಧ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಪದವಿ, ಡಿಪ್ಲೋಮಾ, 12ನೇ ತರಗತಿ ಮತ್ತು 10ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವಯೋಮಿತಿ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ 30 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ :
ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವೇತನ :
ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,900/- ರಿಂದ 1,12,400/- ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 1000/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಹಿಳಾ/ಮಾಜಿಸೈನಿಕ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ :
*ಡಿಆರ್‌ಡಿಒ ಸಿಇಪಿಟಿಎಎಂ ನೇಮಕಾತಿಯ ಶೀಘ್ರಲಿಪಿಗಾರ, ಜ್ಯೂನಿಯರ್ ಟ್ರಾನ್ಸ್‌ಲೇಟರ್ ಅಧಿಕಾರಿ, ಸಹಾಯಕ, ಫೈರ್‌ಮೆನ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.drdo.gov.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. *ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ನವೆಂಬರ್ 7,2022 ರಿಂದ ಡಿಸೆಂಬರ್ 7,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಧಿಕೃತ ವೆಬ್ ಸೈಟ್ : https://www.drdo.gov.in/
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 7

Leave A Reply

Your email address will not be published.