ಶಾಸಕ ಎಂ.ಪಿ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಶವವಾಗಿ ಪತ್ತೆ !!!

ದಾವಣಗೆರೆಯ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಸೋದರ ಪುತ್ರ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರಕಿದೆ. ಕಳೆದ ಐದು ದಿನಗಳಿಂದ ನಾಪತ್ತೆಯಾಗಿರುವ ಚಂದ್ರಶೇಖರ್ ಪತ್ತೆಗೆ ಪೊಲಿಸರು ತೀವ್ರ ಹುಡುಕಾಟ ನಡೆಸಿದ್ದು, ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

 

ಹೊನ್ನಾಳಿಯ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದರು ಎಂಬ ವರದಿಯಾಗಿತ್ತು. ಇದೀಗ ಅವರ ಕಾರು ಪತ್ತೆಯಾಗಿದ್ದು, ಸಹೋದರನ ಪುತ್ರನದ್ದೇ ಎಂಬುದಾಗಿ ತಿಳಿದು ಬಂದಿದೆ. ಅಲ್ಲದೇ ಅವರು ತುಂಗಾ ಕಾಲುವೆಯಲ್ಲಿ ಪತ್ತೆಯಾದ ಕಾರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಚಂದ್ರಶೇಖರ್ ಕಾರು ತುಂಗಾ ಮುಖ್ಯ ಕಾಲುವೆಯಲ್ಲಿ ಬಿದ್ದಿದೆ. ಈ ಕಾರನ್ನು ಅಗ್ನಿಶಾಮಕ ಸಿಬ್ಬಂದಿಗಳು ಮೇಲೆತ್ತಿದಾಗ ಅದರಲ್ಲಿ ಶಾಸಕರ ಸಹೋದರನ ಪುತ್ರ ಚಂದ್ರಶೇಖರ್ ಮೃತದೇಹ ಪತ್ತೆಯಾಗಿರೋದಾಗಿ ತಿಳಿದು ತಿಳಿದು ಬಂದಿದೆ.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ತುಂಗಾ ಕಾಲುವೆಗೆ ಚಂದ್ರಶೇಖರ್ ಕಾರು ಬಿದ್ದಿರುವುದು ಪತ್ತೆಯಾಗಿದೆ. ಈ ಹಿನ್ನೆಲೆ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದು, ಕ್ರೇನ್ ಮೂಲಕ ಕಾರನ್ನು ಮೇಲಕ್ಕೆ ಎತ್ತಲಾಗಿದೆ. ಈ ಕಾರಿನಲ್ಲಿ ಚಂದ್ರಶೇಖರ್ ಮೃತದೇಹ ಇರುವುದು ಪತ್ತೆಯಾಗಿದೆ.
ಈ ಹಿನ್ನೆಲೆ ತುಂಗಾ ಕಾಲುವೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ರೇಣುಕಾಚಾರ್ಯ ಅವರ ದುಃಖದ ಕಟ್ಟೆ ಒಡೆದುಹೋಗಿದೆ.

Leave A Reply

Your email address will not be published.