ವಿಟ್ಲ: ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಅಪ್ರಾಪ್ತ ಬಾಲಕಿಯ ಅತ್ಯಾಚಾರ!! ಗೆಳೆಯರೊಂದಿಗೆ ಸೇರಿ ಅಪಹರಣ-ಆರೋಪಿಯ ಬಂಧನ!!

ವಿಟ್ಲ: ಇನ್ಸ್ಟಾಗ್ರಾಮ್ ಮೂಲಕ ಅಪ್ರಾಪ್ತ ಬಾಲಕಿಯೊಬ್ಬಳನ್ನು ಪರಿಚಯಿಸಿಕೊಂಡು,ಮನೆಯಲ್ಲಿ ಯಾರೂ ಇಲ್ಲದ ವೇಳೆ ದೈಹಿಕ ಸಂಪರ್ಕ ಬೆಳೆಸಿದಲ್ಲದೇ ಗೆಳೆಯರೊಂದಿಗೆ ಸೇರಿಕೊಂಡು ಅಪಹರಣ ನಡೆಸಿದ ಪ್ರಕರಣವೊಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ನಾಡು ಎಂಬಲ್ಲಿ ನಡೆದಿದ್ದು, ಪ್ರಕರಣದ ಸಂಬಂಧ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

 

ಬಂಧಿತ ಆರೋಪಿಯನ್ನು ಕೊಲ್ನಾಡು ಗ್ರಾಮದ ಕುಲಾಲು ನಿವಾಸಿ ಸಂಶೀರ್ ಎಂದು ಗುರುತಿಸಲಾಗಿದ್ದು, ಈತ ಇನ್ಸ್ಟಾಗ್ರಾಮ್ ಮೂಲಕ ಬಾಲಕಿಯೊಬ್ಬಳಿಗೆ ಸಂದೇಶ ರವಾನಿಸಿ, ಪ್ರೀತಿಯ ನಾಟಕವಾಡಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೇ, ಗೆಳೆಯರೊಂದಿಗೆ ಸೇರಿಕೊಂಡು ಬಾಲಕಿಯನ್ನು ಅಪಹರಣ ನಡೆಸಿದ್ದ ಎಂದು ದೂರಲಾಗಿತ್ತು.

ಈ ಬಗ್ಗೆ ತನಿಖೆ ನಡೆಸಿದ ವಿಟ್ಲ ಠಾಣಾ ಇನ್ಸ್ಪೆಕ್ಟರ್ ನಾಗರಾಜ್ ಎಚ್. ಹಾಗೂ ಉಪನಿರೀಕ್ಷಕ ಸಂದೀಪ್ ಶೆಟ್ಟಿ ನೇತೃತ್ವದ ಪೊಲೀಸರ ತಂಡ ಆರೋಪಿಯನ್ನು ಹೆಡೆಮುರಿಕಟ್ಟಿದ್ದು, ಉಳಿದ ಆರೋಪಿಗಳಿಗಾಗಿ ಬಲೆ ಬೀಸಲಾಗಿದೆ.

Leave A Reply

Your email address will not be published.