ಮಂಗಳೂರಿನಲ್ಲಿ ಆಫ್ರಿಕನ್ ಹಂದಿ ಜ್ವರ ದೃಢ | ಜಾಗೃತ ವಲಯವೆಂದು ಘೋಷಣೆ

ಮಂಗಳೂರು: ನೀರುಮಾರ್ಗ ಗ್ರಾಮದ ಕೆಲರಾಯಿ ಪ್ರದೇಶದಲ್ಲಿರುವ ಹಂದಿ ಸಾಕಣೆ ಕೇಂದ್ರವೊಂದರ ಹಂದಿಗಳಿಗೆ ಆಫ್ರಿಕನ್‌ ಹಂದಿ ಜ್ವರ ಬಾಧಿಸಿರುವುದು ದೃಢಪಟ್ಟಿದೆ. ಈ ರೋಗ ಹರಡುವುದನ್ನು ತಡೆಗಟ್ಟಲು ರಾಷ್ಟ್ರೀಯ ರೋಗ ನಿಯಂತ್ರಣ ಮಾರ್ಗಸೂಚಿಯಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ರವಿಕುಮಾರ್‌ ಎಂ.ಆರ್‌. ತಿಳಿಸಿದ್ದಾರೆ.

ಈ ಹಂದಿ ಸಾಕಣೆ ಕೇಂದ್ರದಿಂದ 1 ಕಿ.ಮೀ. ವ್ಯಾಪ್ತಿಯನ್ನು ರೋಗ ಪೀಡಿತ ವಲಯ ಮತ್ತು 10 ಕಿ.ಮೀ. ವ್ಯಾಪ್ತಿಯನ್ನು ಜಾಗೃತ ವಲಯವೆಂದು ಘೋಷಿಸ ಲಾಗಿದೆ. ಬಾಧಿತ ಹಂದಿಗಳನ್ನು ವಧಿಸಿ ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಿ ಆ ಸ್ಥಳದಲ್ಲಿ ಕ್ರಿಮಿನಾಶಕ ಸಿಂಪಡಿಸಲು ಹಾಗೂ ಅಲ್ಲಿಗೆ ಸಾರ್ವಜನಿಕರು ಭೇಟಿ ನೀಡದಂತೆ ಸೂಚನಾ ಫಲಕ ಅಳವಡಿಸುವಂತೆ ಸೂಚಿಸಲಾಗಿದೆ ಎಂದಿದ್ದಾರೆ.

ಆಫ್ರಿಕನ್‌ ಹಂದಿ ಜ್ವರವು ಹಂದಿಗಳ ಸ್ಪರ್ಶದಿಂದ ಅಥವಾ ಅದರ ಮಾಂಸ ಸೇವಿಸುವುದರಿಂದ ಮನುಷ್ಯರಿಗೆ ಹರಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

Leave A Reply

Your email address will not be published.