BIGG NEWS : ರೈತರೇ ಗಮನಿಸಿ : ಪ್ರಧಾನಮಂತ್ರಿ ಕೃಷಿಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ !!!

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಯೋಜನೆಗೆ ನಿಯಮ ಅನುಸಾರವಾಗಿ ಯೋಜನೆ ರೂಪಿಸಲಾಗಿದೆ. ಪ್ರಸ್ತುತ ತೋಟಗಾರಿಕೆ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಸಿಕೊಳ್ಳಲು ಸಹಾಯಧನ ನೀಡಲು ಸರ್ಕಾರ ನಿರ್ಧಾರ ಮಾಡಿದೆ. ಅಲ್ಲದೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

 

ಅರ್ಹ ರೈತರು ಸಮೀಪದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ಅಥವಾ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಿ ಅರ್ಜಿಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 15ರೊಳಗಾಗಿ ಸಲ್ಲಿಸುವಂತೆ ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸಹಾಯಧನವನ್ನು ಕಾಲಕಾಲಕ್ಕೆ ಪರಿಷ್ಕರಿಸುವ ಮಾರ್ಗಸೂಚಿ, ಅನುದಾನ ಲಬ್ಯತೆ ಹಾಗೂ ಜೇಷ್ಟತೆ ಅನುಸಾರವಾಗಿ ಒದಗಿಸಲಾಗುವುದು ಮಾಹಿತಿ ನೀಡಲಾಗಿದೆ.

Leave A Reply

Your email address will not be published.