E Shram Card : ಅಸಂಘಟಿತ ಕಾರ್ಮಿಕರ ಇ ಶ್ರಮ್ ಕಾರ್ಡ್ ನೋಂದಣಿ ಬಗೆ ಮಹತ್ವದ ಮಾಹಿತಿ!!!

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಂಸ್ಥೆ ಅಸಂಘಟಿತ ಕಾರ್ಮಿಕರ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ, ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ಸಂಗ್ರಹಿಸಲು ತಂತ್ರಾಂಶವನ್ನು ಅಭಿವೃದ್ಧಿಪಡಿಸಿ ಈಗಾಗಲೇ ಚಾಲನೆ ನೀಡಲಾಗಿದೆ.

 

ಪ್ರಸ್ತುತ ಅಸಂಘಟಿತ ಕಾರ್ಮಿಕರಿಗೆ ವಿಶೇಷ ನೀತಿಗಳು ಹಾಗೂ ಯೋಜನೆಗಳನ್ನು ರೂಪಿಸಲು ಕೇಂದ್ರ ಸರ್ಕಾರವು ಇ-ಶ್ರಮ್ ಯೋಜನೆ ಜಾರಿಗೊಳಿಸಿದೆ. ಕೇಂದ್ರ ಸರ್ಕಾರವು ಗುರುತಿಸಿರುವ ಸುಮಾರು 379 ವರ್ಗಗಳ ಕಾರ್ಮಿಕರು ಹಾಗೂ ಪಟ್ಟಿಯಲ್ಲಿ ಸೇರಿರದ ಅಸಂಘಟಿತ ಕಾರ್ಮಿಕರು “ಇತರೆ ವರ್ಗ”ಗಳಡಿ ನೋಂದಣಿಯಾಗಬಹುದಾಗಿದೆ.

ಅಲ್ಲದೆ ಇ-ಶ್ರಮ್ ಪೋರ್ಟಲ್‍ನಲ್ಲಿ ನೋಂದಣಿಯು ಉಚಿತವಾಗಿದ್ದು, ಯಶಸ್ವಿ ನೋಂದಣಿಯ ನಂತರ ಫಲಾನುಭವಿಗಳು ಸ್ಥಳದಲ್ಲಿಯೇ ಗುರುತಿನ ಚೀಟಿಯನ್ನು ಪಡೆಯಬಹುದಾಗಿದೆ. ಇದು ದೇಶದಾದ್ಯಂತ ಹಾಗೂ ಜೀವಿತಾವಧಿಯ ಮಾನ್ಯತೆ ಹೊಂದಿದೆ.

ಸಂಘಟನೆ ನೋಂದಣಿಯ ಉಪಯೋಗ :
• ಸಾಮಾಜಿಕ ಭದ್ರತೆ ಹಗೂ ಕಲ್ಯಾಣ ಯೋಜನೆಗಳನ್ನು ಪಡೆಯಲು. ದತ್ತಾಂಶವು ಸರ್ಕಾರಕ್ಕೆ ಅಸಂಘಟಿತ ಕಾರ್ಮಿಕರಿಗೆ ವಿಶೇಷ ನೀತಿಗಳು ಹಾಗೂ ಯೋಜನೆಗಳನ್ನು ರೂಪಿಸಲು ಸಹಾಯಕ ಒಂದು ವರ್ಷದ ಅವಧಿಗೆ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ ಪ್ರಯೋಜನ ಪಡೆಯಬಹುದು (ಅಪಘಾತದಿಂದ ಮರಣ ಹೊಂದಿದಲ್ಲಿ ಅಥವಾ ಶಾಶ್ವತ ದುರ್ಬಲತೆ ಹೊಂದಿದಲ್ಲಿ ರೂ.2 ಲಕ್ಷ ಹಾಗೂ ಭಾಗಶಃ ಅಂಗವೈಕಲ್ಯಕ್ಕೆ ರೂ.1 ಲಕ್ಷ ಪರಿಹಾರ) ರಾಷ್ಟ್ರೀಯ ವಿಪತ್ತು ಅಥವಾ ಕೋವಿಡ್-19ರ ಸಾಂಕ್ರಾಮಿಕ ಪಿಡುಗಿನಂತಹ ಪರಿಸ್ಥಿತಿಯಲ್ಲಿ ಅರ್ಹ ಕಾರ್ಮಿಕರಿಗೆ ನೆರವು ನೀಡಲು ದತ್ತಾಂಶ ಬಳಸಿಕೊಳ್ಳಬಹುದಾಗಿದೆ.

ಸಂಘಟನೆ ನೋಂದಣಿಗೆ ಅರ್ಹತೆ:-
• 16 ರಿಂದ 59 ವಯೋಮಾನದವರು ಆದಾಯ ತೆರಿಗೆ ಪಾವತಿದಾರರಾಗಿರಬಾರದು.
• ಭವಿಷ್ಯನಿಧಿ ಹಾಗೂ ಇ.ಎಸ್.ಐ ಫಲನುಭವಿಯಾಗಿರಬಾರದು.

ಅವಶ್ಯಕ ದಾಖಲೆಗಳು:-
• ಆಧಾರ್ ಕಾರ್ಡ್.
• ಆಧಾರ್ ಕಾರ್ಡ್ ಸಂಖ್ಯೆಗೆ ಜೋಡಣೆಯಾದ ಮೊಬೈಲ್ ಸಂಖ್ಯೆ
• ಬ್ಯಾಂಕ್ ಖಾತೆ ವಿವರಗಳು.

ನೋಂದಣಿ ವಿಧಾನ:-
ಇ-ಶ್ರಮ್ ಪೋರ್ಟಲ್ www.eshram.gov.in ನಲ್ಲಿ ಸ್ವಯಂ ನೋಂದಣಿ ಅಥವಾ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ನವೆಂಬರ್ ಅಂತ್ಯದವರೆಗೆ ನೋಂದಣಿ ಮಾಡಿಸಿಕೊಳ್ಳಬಹುದು.

Leave A Reply

Your email address will not be published.