ಮಂಗಳೂರು : ವಿವಿಧ ತರಬೇತಿಗೆ ಅರ್ಜಿ ಆಹ್ವಾನ, ಖಾಲಿ ಹುದ್ದೆಗೆ ಅರ್ಜಿ ಆಹ್ವಾನ, ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ!! ಹೆಚ್ಚಿನ ಮಾಹಿತಿ ಇಲ್ಲಿದೆ

ಮಂಗಳೂರು : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು ಐಸಿಐಸಿಐ ಫೌಂಡೆಷನ್ ಸಹಯೋಗದೊಂದಿಗೆ ಪ್ರಸಕ್ತ ಸಾಲಿಗೆ ರೀಟೆಲ್ ಸೇಲ್ಸ್ ಮತ್ತು ಆಫೀಸ್ ಅಡ್ಮೀನ್ಸ್ಟ್ರೇಷನ್ ತರಬೇತಿ ಹಾಗೂ ಸೋಲಾರ್ ಪ್ಯಾನಲ್ ರಿಪೇರಿ ಮತ್ತು ಅಳವಡಿಸುವ ತರಬೇತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

 

ನಿಗಮದ ಪೋರ್ಟ್‍ಲ್ https://kmvstdcl.karnataka.gov.in/ ಮೂಲಕ ಇದೇ ನ.30ರ ವರೆಗೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಾರ್ಯಾಲಯ, ಜನತಾ ಬಜಾರ್ ಕಟ್ಟಡ, 2ನೇ ಮಹಡಿ ಜಿ.ಎಚ್.ಎಸ್ ರಸ್ತೆ, ಮಂಗಳೂರು ಕಚೇರಿ ಅಥವಾ ದೂ.ಸಂಖ್ಯೆ:0824-2951814 ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಕಲಚೇತನರಿಂದ ಖಾಲಿ ಹುದ್ದೆಗೆ ಅರ್ಜಿ ಆಹ್ವಾನ : ಶಿಶು ಅಭಿವೃದ್ಧಿ ಯೋಜನೆಯಡಿ ಮಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತ್‍ಗೆ ಒಬ್ಬರಂತೆ ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣ ಅಥವಾ ಅನುತ್ತೀರ್ಣರಾದ ವಿಕಲಚೇತನರಿಂದ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯರ (ವಿ.ಅರ್.ಡ್ಲ್ಯೂ) ಹುದ್ದೆಗೆ 9,000 ರೂ.ಗಳಂತೆ ಹಾಗೂ ಪದವಿ ಉತ್ತೀರ್ಣರಾದ ವಿಕಲಚೇತನರಿಂದ ತಾಲೂಕು ಮಟ್ಟದ ವಿವಿಧೊದ್ದೇಶ ಕಾರ್ಯಕರ್ತರ ಹುದ್ದೆಗೆ 15,000 ರೂ.ಗಳಂತೆ ಮಾಸಿಕ ಗೌರವಧನದಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ವಯೋಮಿತಿ : 18ರಿಂದ 45 ವರ್ಷದವರು ಅರ್ಜಿ ಹಾಕಬಹುದು.

ಖಾಲಿ ಇರುವ ಹುದ್ದೆ: ತಾಲೂಕಿನ ಬಾಳ, ಗಂಜಿಮಠ, ಕಂದಾವರ, ಕುಪ್ಪೆಪದವು, ಮಲ್ಲೂರು, ಮುತ್ತೂರು, ಪಡುಪೆರಾರ ಹಾಗೂ ಉಳಾಯಿಬೆಟ್ಟು ಗ್ರಾಮ ಪಂಚಾಯತ್‍ಗಳಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯರ ಹುದ್ದೆ ಖಾಲಿ ಇದೆ. ಮೂಡಬಿದಿರೆ ತಾಲೂಕಿನ ಧರೆಗುಡ್ಡೆ, ಹೊಸಬೆಟ್ಟು, ಇರುವೈಲು, ಪಡುಕೊಣಾಜೆ, ಪಾಲಡ್ಕ, ಪುತ್ತಿಗೆ, ಶಿರ್ತಾಡಿ ಮತ್ತು ತೆಂಕಮಿಜಾರು ಗ್ರಾಮ ಪಂಚಾಯತ್, ಮುಲ್ಕಿ ತಾಲೂಕಿನ ಬಳ್ಕುಂಜೆ, ಕೆಮ್ರಾಲ್ ಗ್ರಾಮ ಪಂಚಾಯತ್, ಉಳ್ಳಾಲ ತಾಲೂಕಿನ ಅಂಬ್ಲಮೊಗರು, ಮಂಜನಾಡಿ, ಬೊಳಿಯಾರ್, ಕಿನ್ಯಾ, ಕೋಣಾಜೆ, ಮುನ್ನೂರು ಗ್ರಾಮ ಪಂಚಾಯತ್‍ಗಳಲ್ಲಿ ಗ್ರಾಮೀಣ ಪುನರ್ವಸತಿ ಹಾಗೂ ತಾಲೂಕು ಮಟ್ಟದ ವಿವಿಧೊದ್ದೇಶ ಕಾರ್ಯಕರ್ತರ ಹುದ್ದೆ ಖಾಲಿ ಇದೆ.

ಆಸಕ್ತ ವಿಕಲಚೇತನರು ಇದೇ ನ.30ರೊಳಗೆ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ, 1ನೇ ಮಹಡಿ ಜಿಲ್ಲಾ ಸ್ತ್ರೀ ಶಕ್ತಿ ಭವನ ಕಟ್ಟಡ, ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದ ಬಳಿ ಬಿಜೈ, ಮಂಗಳೂರು-05 ಈ ಕಚೇರಿಯಿಂದ ಅರ್ಜಿ ಪಡೆದು ಭರ್ತಿ ಮಾಡಿ ಅದೇ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ: 0824-2263199 ಅನ್ನು ಸಂಪರ್ಕಿಸುವಂತೆ ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಆಹ್ವಾನ : ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು https://ssp.postmatric.karnataka.gov.in ವೆಬ್ ಸೈಟ್ ವಿಳಾಸ ಮೂಲಕ ಪೋಸ್ಟ್ ಮೆಟ್ರಿಕ್ ಸ್ಕಾಲರ್ ಶಿಪ್ 2022-23 ನಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ:9480843114 ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.