KPSC : ಕೆಪಿಎಸ್ ಸಿ ಕನ್ನಡ ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳ ಪಟ್ಟಿ ಪ್ರಕಟ!!!

ಕರ್ನಾಟಕ ಲೋಕಸೇವಾ ಆಯೋಗವು 2021 ನೇ ಸಾಲಿನಲ್ಲಿ ನಡೆಸಿದ್ದ ಕಡ್ಡಾಯ ಕನ್ನಡ ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಈ ಪರೀಕ್ಷೆ ಬರೆದ ಅಭ್ಯರ್ಥಿಗಳು ಕೆಪಿಎಸ್‌ಸಿ ವೆಬ್‌ಸೈಟ್‌ ಗೆ ಭೇಟಿ ನೀಡಿ ಫಲಿತಾಂಶ ಚೆಕ್‌ ಮಾಡಬಹುದು.

ಕರ್ನಾಟಕ ಲೋಕಸೇವಾ ಆಯೋಗವು 2021ನೇ ಸಾಲಿನಲ್ಲಿ 04-12-2021 ರಂದು ನಡೆಸಿದ್ದ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಫಲಿತಾಂಶವನ್ನು ಕೆಪಿಎಸ್‌ಸಿ ವೆಬ್‌ಸೈಟ್‌ಗೆ ಭೇಟಿ ನೀಡಿ ಚೆಕ್‌ ಮಾಡಬಹುದು.

ಕೆಪಿಎಸ್‌ಸಿ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿಯಲ್ಲಿ ರಿಜಿಸ್ಟರ್‌ ನಂಬರ್ ಅನ್ನು ನೀಡಲಾಗಿದ್ದು, ಅಭ್ಯರ್ಥಿಗಳು ಅದೇ ಪ್ರಕಾರ ತಮ್ಮ ಅರ್ಹತೆಯನ್ನು ಚೆಕ್‌ ಮಾಡಿಕೊಳ್ಳಬಹುದು.
ದಿನಾಂಕ 31-07-2020 ರಂದು ಕೆಪಿಎಸ್‌ಸಿ ಕಡ್ಡಾಯ ಕನ್ನಡ ಪರೀಕ್ಷೆಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಿತ್ತು. ಅರ್ಜಿ ಸಲ್ಲಿಸಿ ಪರೀಕ್ಷೆ ಬರೆದ ಅಭ್ಯರ್ಥಿಗಳು ವೆಬ್‌ಸೈಟ್‌ https://www.kpsc.kar.nic.in/ ಗೆ ಭೇಟಿ ನೀಡಿ ಫಲಿತಾಂಶ ಚೆಕ್‌ ಮಾಡಬಹುದು. ಅಥವಾ ಕೆಳಗಿನ ಡೈರೆಕ್ಟ್‌ ಲಿಂಕ್‌ ಅನ್ನು ಕ್ಲಿಕ್ ಮಾಡಿ ಸಹ ಚೆಕ್‌ ಮಾಡಬಹುದು.

Leave A Reply

Your email address will not be published.