Reliance Digital : ಬಂಪರ್ ಆಫರ್ ; 24,999 ರೂ.ಬೆಲೆಯ ಈ ಫೋನ್ ಈಗ ಕೇವಲ ರೂ.12,999 ರೂ.ನಲ್ಲಿ ಲಭ್ಯ!!!

ಸ್ಮಾರ್ಟ್​ಫೋನ್​ ಇಲ್ಲದೆ ಕೆಲಸ ಕಾರ್ಯ ಯಾವುದು ನಡಿಯಲ್ಲ. ಮಕ್ಕಳಿಂದ ಹಿಡಿದು ಹಿರಿಯರ ವರೆಗೂ ಸ್ಮಾರ್ಟ್​ಫೋನ್​ ಉಪಯೋಗಿಸದವರು ಯಾರೂ ಇಲ್ಲ. ಹೊಸ ಹೊಸ ಆಯ್ಕೆಗಳೊಂದಿಗೆ ಮಾರುಕಟ್ಟೆಗೆ ಸ್ಮಾರ್ಟ್​ಫೋನ್​ಗಳನ್ನು ಪರಿಚಯಿಸುತ್ತಿದೆ. ಹಾಗಿದ್ದರೆ ನಾವು ಈ ಸ್ಮಾರ್ಟ್​ಫೋನ್​ ಯಾವುದು ಬೆಸ್ಟ್ ಅನ್ನೋದು ಕೂಡ ನಮಗೆ ಗೊತ್ತಿದ್ದರೆ ಉತ್ತಮ.
ನೀವು ಹೊಸ ಸ್ಮಾರ್ಟ್​ಫೋನ್ ಖರೀದಿಸುವ ಯೋಜನೆಯಲ್ಲಿದ್ದರೆ ಇಲ್ಲೊಂದು ಅತ್ಯುತ್ತಮ ಆಫರ್ ಇದೆ. ಮಧ್ಯಮ ಬೆಲೆಯ ಈ ಮೊಬೈಲ್ ಅನ್ನು ನೀವು ಬಜೆಟ್ ಬೆಲೆಗೆ ಖರೀದಿಸಬಹುದು. ರಿಲಯನ್ಸ್ ಡಿಜಿಟಲ್​ನಲ್ಲಿ ನಡೆಯುತ್ತಿರುವ ಮೊಬೈಲ್ ಡೇಸ್ ಸೇಲ್​ನಲ್ಲಿ ಬಂಪರ್ ಆಫರ್ ನೀಡಲಾಗಿದೆ.

 

ವಿವೋ, ರಿಯಲ್ ಮಿ, ಒಪ್ಪೋ, ಮೋಟೋ, ರೆಡ್ಮಿ ಸೇರಿದಂತೆ ಅನೇಕ ಸ್ಮಾರ್ಟ್​ಫೋನ್​ಗಳು ಆಕರ್ಷಕ ರಿಯಾಯಿತಿ ದರಕ್ಕೆ ಮಾರಾಟ ಆಗುತ್ತಿದೆ. ಮುಖ್ಯವಾಗಿ ಇತ್ತೀಚೆಗಷ್ಟೆ ಬಿಡುಗಡೆ ಆದ ಒಪ್ಪೋ ಕಂಪನಿಯ ಒಪ್ಪೋ ಎ17 (Oppo A17) ಫೋನ್ ಶೇ. 50 ರಷ್ಟು ಡಿಸ್ಕೌಂಟ್ ಪಡೆದುಕೊಂಡಿದೆ. ಇಷ್ಟೇ ಅಲ್ಲದೆ ಕ್ಯಾಶ್​ಬ್ಯಾಕ್ ಆಫರ್ ಮೂಲಕ ಮತ್ತಷ್ಟು ಕಡಿಮೆ ಬೆಲೆಗೆ ಈ ಫೋನನ್ನು ನಿಮ್ಮದಾಗಿಸಬಹುದು.

ಒಪ್ಪೋ A17 ಸ್ಮಾರ್ಟ್‌ಫೋನ್​ನ 4GB RM + 64GB ಸ್ಟೋರೇಜ್ ಆಯ್ಕೆಯ ಮೂಲ ಬೆಲೆ ಭಾರತದಲ್ಲಿ 24,999 ರೂ. ಇದೆ. ಆದರೀಗ ರಿಲಯನ್ಸ್ ಡಿಜಿಟಲ್​ನಲ್ಲಿ ನಡೆಯುತ್ತಿರುವ ಮೊಬೈಲ್ ಡೇಸ್ ಸೇಲ್​ನಲ್ಲಿ ಇದು ಶೇ. 50 ರಷ್ಟು ರಿಯಾಯಿತಿ ಪಡೆದುಕೊಂಡು ಕೇವಲ 12,499 ರೂ. ಗೆ ಮಾರಾಟ ಆಗುತ್ತಿದೆ. ಜೊತೆಗೆ ಮೊಬಿಕ್​ವಿಕ್ ವಾಲೆಟ್ ಮೂಲಕ 1000 ರೂ. ಗಳ ಮತ್ತಷ್ಟು ಡಿಸ್ಕೌಂಟ್ ಪಡೆಯಬಹುದು. ಈ ಫೋನ್‌ ಲೇಕ್ ಬ್ಲೂ ಮತ್ತು ಮಿಡ್ನೈಟ್ ಬ್ಲಾಕ್ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದೆ.

ಒಪ್ಪೋ A17 ಸ್ಮಾರ್ಟ್ ಪೋನಿನ ವಿಶೇಷತೆ :
• ಒಪ್ಪೋ A17 ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ.
• ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ.
• ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್‌ ಹೊಂದಿದೆ.
• ಇದಲ್ಲದೆ ವಿಡಿಯೋ ಕರೆಗಳು ಹಾಗೂ ಸೆಲ್ಫಿಗಾಗಿ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
• ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ AI, 360 ಡಿಗ್ರಿ ಫಿಲ್ ಲೈಟ್, ಪೋರ್ಟ್ರೇಟ್ ರಿಟೌಚಿಂಗ್, HDR ಅನ್ನು ಒಳಗೊಂಡಿದೆ.
• ಈ ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.56 ಇಂಚಿನ ಹೆಚ್‌ಡಿ ಪ್ಲಸ್‌ LCD ಡಿಸ್‌ಪ್ಲೇ ಹೊಂದಿದೆ.
• ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್​ನಿಂದ ಕೂಡಿದೆ. ಮೀಡಿಯಾ ಟೆಕ್ ಹೆಲಿಯೊ G35 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.
• ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಬೆಂಬಲವನ್ನು ಪಡೆದಿದೆ.
• ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ.

ನೀವು ಹೊಸ ಸ್ಮಾರ್ಟ್​ಫೋನ್ ಖರೀದಿಸುವ ಯೋಜನೆಯಲ್ಲಿದ್ದರೆ ಈ ಅತ್ಯುತ್ತಮ ಆಫರ್ ಅನ್ನು ಸದುಪಯೋಗ ಪಡಿಸಿಕೊಂಡು ಮಧ್ಯಮ ಬೆಲೆಯ ಈ ಮೊಬೈಲ್ ಅನ್ನು ನೀವು ಬಜೆಟ್ ಬೆಲೆಗೆ ಖರೀದಿಸಬಹುದು.

Leave A Reply

Your email address will not be published.