Shocking news: ಕಾಲೇಜಿನಿಂದ ಮಗಳನ್ನು ಕರೆದುಕೊಂಡು ಹೋಗಲು ಬಂದ ತಂದೆ ಮೇಲೆ ಅಟ್ಯಾಕ್!!ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಿ !!

ಕಾಲೇಜಿನಿಂದ ಮಗಳನ್ನು ಕರೆದುಕೊಂಡು ಬರಲು ಹೋಗಿದ್ದ ತಂದೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಭಯಾನಕ ಘಟನೆಯೊಂದು ಮುನ್ನಲೆಗೆ ಬಂದಿದೆ.

 

ಹೌದು!!!. ಈ ಪ್ರಕರಣ ತಮಿಳುನಾಡಿನ ಮಧುರೈನಲ್ಲಿರುವ ಮೀನಾಕ್ಷಿ ಸರ್ಕಾರಿ ಕಲಾ ಕಾಲೇಜಿನಲ್ಲಿ ನಡೆದಿದ್ದು, ತಮ್ಮ ಮಗಳನ್ನು ಕರೆದುಕೊಂಡು ಹೋಗಲು ಕಾಲೇಜಿಗೆ ಬಂದಿದ್ದ ಪಿ.ಸೆಂಥಮಿಲ್​ ಪಂಡಿಯನ್​ ಎಂಬ 50 ವರ್ಷದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಲಾಗಿದೆ.

ಈ ಘಟನೆ ನಡೆದ ಸಂದರ್ಭದಲ್ಲಿ ಸ್ಥಳದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿದ್ದು, ಈ ವ್ಯಕ್ತಿಗೆ ಹೆಲ್ಮೆಟ್​ನಿಂದ ದಾಳಿ ಮಾಡಿರುವ ಕುರಿತು ವರದಿಯಾಗಿದೆ. ಪ್ರತಿನಿತ್ಯವೂ ಪುಂಡರ ಗುಂಪು ಈ ಕಾಲೇಜಿಗೆ ಬಂದು ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

ಈ ವಿದ್ಯಾರ್ಥಿನಿಗೂ ಕೂಡ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಆಕೆಗೆ ಕಿರಿಕಿರಿ ಉಂಟಾಗುತ್ತಿತ್ತು. ಹಾಗಾಗಿ, ಈಕೆಯ ತಂದೆಯೇ ಖುದ್ದು ಬಂದು ಮಗಳನ್ನು ಕರೆದುಕೊಂಡು ಹೋಗುತ್ತಿದ್ದರು ಎನ್ನಲಾಗಿದೆ. ಇದನ್ನು ಸಹಿಸದ ಪುಂಡನೊಬ್ಬ ಹೆಲ್ಮೆಟ್​ನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.

ಈ ಪ್ರಕರಣದ ಕುರಿತು ಪೊಲೀಸರು ಕೇಸ್​ ದಾಖಲಿಸಿ ಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಈ ಸಂದರ್ಭ ಕಾಲೇಜಿನ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿದ್ದ ಆರು ಮಂದಿಯನ್ನು ಬಂಧಿಸಲಾಗಿದೆ.

Leave A Reply

Your email address will not be published.