ಬೈಕ್ ಆಟೋ ಖರೀದಿಗೆ 50,000 ರೂ.ನಿಂದ 1,00,000 ರವರೆಗೆ ಸಹಾಯಧನ | ಈ ರೀತಿ ಅರ್ಜಿ ಸಲ್ಲಿಸಿ|
ಸರ್ಕಾರ ಜನರಿಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಗತಿಗಾಗಿ ಆರ್ಥಿಕ ನೆರವನ್ನು ನೀಡಿ ಪ್ರೋತ್ಸಾಹ ಮಾಡುತ್ತಿದೆ. ರೈತರಿಗೆ ಆರ್ಥಿಕ ಧನ ಸಹಾಯ, ಕೃಷಿ ಚಟುವಟಿಕೆಯನ್ನು ಪ್ರೋತ್ಸಾಹಿಸಲು ರಸಗೊಬ್ಬರ, ಇಳುವರಿಗೆ ಬೇಕಾದ ಸಾಧನಗಳನ್ನು ಕಡಿಮೆ ಬೆಲೆಗೆ ನೀಡುವ ಜೊತೆಗೆ ಬೆಳೆಗಳಿಗೆ ಬೆಂಬಲ ನೀಡುತ್ತಿದೆ.
ಈ ನಡುವೆ ಬಡ ಜನರಿಗೆ ಸಹಾಯ ಮಾಡಲು ದ್ವಿಚಕ್ರ ವಾಹನವನ್ನು ಕೊಂಡುಕೊಳ್ಳಲು ಸಬ್ಸಿಡಿಯನ್ನು ಕೂಡ ನೀಡಲಾಗುತ್ತದೆ. ಜನಸಾಮಾನ್ಯರಿಗೆ ಇಂದಿನ ವ್ಯಾಪಾರ ಮತ್ತು ದಿನನಿತ್ಯದ ಚಟುವಟಿಕೆ ಮಾಡಲು ದ್ವಿಚಕ್ರ ತ್ರಿಚಕ್ರ ವಾಹನ ಅತಿ ಅವಶ್ಯವಾಗಿದೆ. ಈ ನಿಟ್ಟಿನಲ್ಲಿ ಬಡ ಜನರಿಗೆ ಸಹಾಯ ಮಾಡಲು ದ್ವಿಚಕ್ರ ವಾಹನವನ್ನು ಕೊಂಡುಕೊಳ್ಳಲು ಸಬ್ಸಿಡಿಯನ್ನು ನೀಡಲಾಗುತ್ತದೆ.
2022-23ನೇ ಸಾಲಿನ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗಾಗಿ ಡಾ. ಬಿ.ಆರ್. ಅಂಬೇಡ್ಕರ ಅಭಿವೃದ್ಧಿ ನಿಗಮದಿಂದ ಈ ಯೋಜನೆಗೆ (ಉದ್ಯವ ಶೀಲತಾ ಅಭಿವೃದ್ಧಿ ಯೋಜನೆ (ದ್ವಿ-ಚಕ್ರ/ತ್ರಿ-ಚಕ್ರ ಸರಕುಸಾಗಾಣಿಕೆ ವಾಹನ) ಅಪೇಕ್ಷಿತ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಯೋಜನೆಗೆ ಅರ್ಜಿ ಸಲ್ಲಿಸಲು 20-11-22 ಕೊನೆಯ ದಿನಾಂಕವಾಗಿದ್ದು, ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ಸಲ್ಲಿಸಬಹುದು.
https://sevasindhu.karnataka.gov.in ಮೂಲಕ ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರದಲ್ಲಿ ಆನ್‌ಲೈನ್ ಮುಖಾಂತರ ಆಸಕ್ತರು ಮೇಲಿನ ಯೋಜನೆಗಳಿಗೆ ಅರ್ಜಿಗಳನ್ನು ಸಲ್ಲಿಸಿ ಸದುಪಯೋಗಪಡಿಸಿಕೊಳ್ಳಬಹುದು.
ಈ ಸೌಲಭ್ಯವನ್ನು ಪಡೆಯಲು ಅರ್ಹತೆಗಳ ಜೊತೆಗೆ ಮಾನದಂಡಗಳು ಹೀಗಿವೆ:
ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕಾಗಿದ್ದು ಜೊತೆಗೆ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಈ ಯೋಜನೆಗೆ ಅರ್ಜಿ ಸಲ್ಲಿಸುವ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಗ್ರಾಮೀಣ ಪ್ರದೇಶದಲ್ಲಿ ರೂ.1.50,000/- ಮತ್ತು ನಗರ ಪ್ರದೇಶದಲ್ಲಿ ರೂ.2,00,000/-ಗಳ ಮಿತಿಯಲ್ಲಿರಬೇಕಾಗಿದೆ. ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಅರ್ಜಿದಾರರು ಕನಿಷ್ಠ 21 ವರ್ಷಗಳಿಂದ ಗರಿಷ್ಠ 50 ವರ್ಷದೊಳಗಿರಬೇಕು.
ಅರ್ಜಿದಾರರು ಅಥವಾ ಅವರ ಕುಟುಂಬದವರು ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದಿರಬಾರದು ಮತ್ತು ಸರ್ಕಾರಿ / ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಿಯಲ್ಲಿ ಇರಬಾರದು. ವಾಹನಗಳಿಗೆ ಸೌಲಭ್ಯ ಪಡೆಯಲು ಫಲಾಪೇಕ್ಷಿಗಳು ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕಾಗುತ್ತದೆ.
ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಡಿ ಸ್ವಯಂ ಉದ್ಯೋಗಕ್ಕಾಗಿ ದ್ವಿ-ಚಕ್ರ / ತ್ರಿ -ಚಕ್ರ ಸರಕು ಸಾಗಾಣಿಕೆ ವಾಹನ ಉದ್ದೇಶಗಳಿಗೆ ಘಟಕ ವೆಚ್ಚದಲ್ಲಿ ರೂ.50,000),/-ಗಳ ಸಹಾಯಧನ ಹಾಗೂ ಉಳಿದ ಮೊತ್ತ ಬ್ಯಾಂಕ್ ಸಾಲವಾಗಿ ಅರ್ಜಿದಾರರು ಸೇವಾ ವ್ಯಾಪ್ತಿಯ ಬ್ಯಾಂಕ್ ಗಳಿಂದ ಮಂಜೂರಾತಿ ಪಡೆಯುವ ಷರತ್ತಿಗೆ ಒಳಪಟ್ಟು ಸಹಾಯಧನವನ್ನು ಮಂಜೂರು ಮಾಡುವ ಪ್ರಕ್ರಿಯೆ ನಡೆಯುತ್ತದೆ.