ಬೆಳ್ತಂಗಡಿ : ಬ್ಯಾನರ್ ಕಟ್ಟುವ ಸಂದರ್ಭ ಶಾರ್ಟ್ ಸರ್ಕ್ಯೂಟ್ | ಓರ್ವ ಮೃತ್ಯು, ಇನ್ನೋರ್ವ ಗಂಭೀರ!

ಬೆಳ್ತಂಗಡಿ : ಮಂಗಳೂರಿನಲ್ಲಿ ಕಾರ್ಮಿಕ ಸಂಘದ ವತಿಯಿಂದ ನಡೆಯಲಿರುವ ಕಾರ್ಯಕ್ರಮದ ಅಂಗವಾಗಿ ಬೆಳ್ತಂಗಡಿ ಬಸ್ ನಿಲ್ದಾಣದ ಪಕ್ಕದ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಬ್ಯಾನರ್ ಕಟ್ಟುತ್ತಿದ್ದ ವೇಳೆ ಇಬ್ಬರಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಗಂಭೀರ ಗಾಯಗೊಂಡ ಘಟನೆಯೊಂದು ನಡೆದಿದೆ.

ಈ ಘಟನೆ ಇಂದು ಸಂಜೆ 7 ಗಂಟೆ ಸುಮಾರಿಗೆ ನಡೆದಿದೆ.

ಖಾಸಗಿ ಪ್ರಿಂಟರ್ಸ್ ಗೆ ಕಾರ್ಯಕ್ರಮದ ಬ್ಯಾನರ್ ಹಾಕಲು ಸಂಘದವರು ಕ್ವಾಂಟ್ರಾಕ್ಟ್ ನೀಡಲಾಗಿದ್ದು, ಹಾಗಾಗಿ ಗೂಡ್ಸ್ ಆಟೋದಲ್ಲಿ ಬ್ಯಾನರ್ ತಂದು ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಇಂದು ಸಂಜೆ ಅಳವಡಿಸುವ ಕೆಲಸ ನಡೆಯುತ್ತಿತ್ತು. ಆದರೆ ಕೆಲಸ ಮಾಡುವ ಸಂದರ್ಭದಲ್ಲಿ ಬ್ಯಾನರ್ ನ ಕಬ್ಬಿಣ ರಾಡ್ ವಿದ್ಯುತ್ ಲೈನ್ ನ ತಂತಿಗೆ ತಾಗಿದ್ದು ಈ ವೇಳೆ ಕೆಲಸದ ಇಬ್ಬರು ಯುವಕರಿಗೆ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ ಎಸೆಯಲ್ಪಟ್ಟಿದ್ದಾರೆ. ಕೂಡಲೇ ಸ್ಥಳೀಯರ ಸಹಕಾರದಿಂದ ಇಬ್ಬರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದ್ದು, ಓರ್ವ ಮೃತ ಪಟ್ಟಿದ್ದು, ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸ್ಥಳದಲ್ಲಿ ಜನ ಜಮಾಯಿಸಿದ್ದಾರೆ. ಈ ಇಬ್ಬರು ಯುವಕರು ಸ್ಥಳೀಯ ನಿವಾಸಿಗಳಾಗಿದ್ದು, ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Leave A Reply

Your email address will not be published.